ಗುರುವಾರ , ಜುಲೈ 7, 2022
23 °C

ಜಿತೇಂದ್ರ ಮಜೇಥಿಯಾಗೆ ‘ಸೇವಾ ಗೌರವ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುತ್ತಲ (ಹಾವೇರಿ): ಗಾಂಧಿವಾದಿ, ಸ್ವಾತಂತ್ರ್ಯ ಸೇನಾನಿ ಗುದ್ಲೆಪ್ಪ ಹಳ್ಳಿಕೇರಿ ಸ್ಮರಣಾರ್ಥ ನೀಡುವ ಪ್ರಸಕ್ತ ಸಾಲಿನ ‘ಸೇವಾ ಗೌರವ’ ಪ್ರಶಸ್ತಿಗೆ ಹುಬ್ಬಳ್ಳಿಯ ಮಜೇಥಿಯಾ ಫೌಂಡೇಶನ್ ಸಂಸ್ಥಾಪಕ ಜಿತೇಂದ್ರ ಮಜೇಥಿಯಾ ಆಯ್ಕೆಯಾಗಿದ್ದಾರೆ. 

ಹಾವೇರಿ ತಾಲ್ಲೂಕಿನ ಹೊಸರಿತ್ತಿ ಗ್ರಾಮದ ಮಹಾತ್ಮ ಗಾಂಧಿ ಗ್ರಾಮೀಣ ಗುರುಕುಲದಲ್ಲಿ ಗುದ್ಲೆಪ್ಪ ಹಳ್ಳಿಕೇರಿಯವರ 117ನೇ ಜನ್ಮದಿನೋತ್ಸವದಂದು (ಜೂನ್‌ 6ರಂದು) ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ‘ಸೇವಾ ಗೌರವ’ ಪ್ರಶಸ್ತಿಯು ₹20 ಸಾವಿರ ನಗದು, ಪ್ರಶಸ್ತಿ ಪತ್ರ ಮತ್ತು ಫಲಕಗಳನ್ನು ಒಳಗೊಂಡಿದೆ. 

ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾದ ಜನರಿಗೆ, ಅಶಕ್ತ ಮಕ್ಕಳಿಗೆ ಹಾಗೂ ಅಸಹಾಯಕ ಮಹಿಳೆಯರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಆರೋಗ್ಯ ಸೌಲಭ್ಯಗಳನ್ನು ಜಿತೇಂದ್ರ ಮಜೇಥಿಯಾ ಅವರು ತಮ್ಮ ಫೌಂಢೇಶನ್‌ ಮೂಲಕ ಕಲ್ಪಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರತಿಷ್ಠಾನ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು