ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉತ್ತಮ ಹವ್ಯಾಸ ರೂಢಿಸಿಕೊಳ್ಳಿ’: ಎಸ್‌ಪಿ ಹನುಮಂತರಾಯ

Last Updated 14 ಆಗಸ್ಟ್ 2021, 13:54 IST
ಅಕ್ಷರ ಗಾತ್ರ

ಹಾವೇರಿ: ‘ಶಾಲೆಗಳಲ್ಲಿ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಶಿಬಿರಗಳ ಮಹತ್ವ ತಿಳಿಸಬೇಕು. ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು. ಆರೋಗ್ಯಕರ ಜೀವನಕ್ಕೆ ಉತ್ತಮ ಆಹಾರ ಪದ್ಧತಿಯೂ ಅವಶ್ಯ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.

ನಗರದ ಕೆ.ಎಲ್.ಇ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ 2021-22ನೇ ಸಾಲಿನ ಶಾಲಾ ಮಂತ್ರಿಮಂಡಲಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಕಡೆ ಗಮನ ಹರಿಸಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಾಂಶುಪಾಲರಾದ ಸಪ್ನಾ ಆರ್ ಲೋಬೊ,ಬೋಧಕ ಮತ್ತು ಬೋಧಕೇತರ ಸಿಬ್ಬಂದಿ,ವಿದ್ಯಾರ್ಥಿಗಳು, ಪೋಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT