ಭಾನುವಾರ, ಏಪ್ರಿಲ್ 18, 2021
31 °C

‘ಅಪೌಷ್ಟಿಕ ಮುಕ್ತ ಗ್ರಾಮವನ್ನಾಗಿ ಮಾಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಗ್ರಾಮಗಳಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಗುರುತಿಸಿ ಸೂಕ್ತ ವೈದ್ಯಕೀಯ ತಪಾಸಣೆ ಹಾಗೂ ಪೌಷ್ಟಿಕ ಆಹಾರ ವಿತರಣೆ ಮೂಲಕ ಅಪೌಷ್ಟಿಕ ಮುಕ್ತ ಗ್ರಾಮಗಳಾಗಿ ಘೋಷಣೆ ಮಾಡಲು ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಆಂದೋಲನದ ರೀತಿಯಲ್ಲಿ ಕೈಗೊಳ್ಳುವಂತೆ ಹಾವೇರಿ ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ ಸೂಚನೆ ನೀಡಿದರು.

ಹಾವೇರಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಜಾಗೃತಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ತಾಲ್ಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತರು ಮನೆ–ಮನೆಗೆ ಭೇಟಿ ನೀಡಿ ತೀವ್ರ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಗುರುತಿಸಬೇಕು. ಈ ಮಕ್ಕಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆಗೆ ನಡೆಸಬೇಕು. ಹೆಚ್ಚಿನ ಚಿಕಿತ್ಸೆ ಅವಶ್ಯವಿರುವ ಮಕ್ಕಳನ್ನು ಎನ್.ಆರ್.ಸಿ.ಗೆ ದಾಖಲಿಸಬೇಕು. ಮಕ್ಕಳ ಪಾಲಕರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ಕ್ರಮಗಳ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ ಮಾತನಾಡಿ, ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವಿವರಿಸಿದರು.

ಹಾವೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮೇಲ್ವಿಚಾರಕಿಯರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.