ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ ಎಪಿಎಂಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಆಯ್ಕೆ

Last Updated 15 ಜೂನ್ 2020, 16:00 IST
ಅಕ್ಷರ ಗಾತ್ರ

ಹಾವೇರಿ: ನಗರದಲ್ಲಿ ಸೋಮವಾರ ನಡೆದ ಎಪಿಎಂಸಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹಾವೇರಿ ಮತ್ತು ಉಪಾಧ್ಯಕ್ಷರಾಗಿ ಸಣ್ಣಪ್ಪ ಮಾಳಿ ಅವರು ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಲ್ಲಿಕಾರ್ಜುನ ಹಾವೇರಿ 8 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರೆ,ರುದ್ರೇಶ ಚಿನ್ನಣ್ಣನವರ 7 ಮತಗಳನ್ನು ಪಡೆದು ಪರಾಭವಗೊಂಡರು.

ಒಟ್ಟು 16 ನಿರ್ದೇಶಕರನ್ನು ಹೊಂದಿರುವ ಎಪಿಎಂಸಿಯಲ್ಲಿ ಬಿಜೆಪಿಯ 11 ನಿರ್ದೇಶಕರು, ಕಾಂಗ್ರೆಸ್‍ ಪಕ್ಷದ 5 ನಿರ್ದೇಶಕರು ಇದ್ದರು. ಸೋಮವಾರ ಚುನಾವಣೆ ನಡೆದ ಸಂದರ್ಭದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ರುದ್ರೇಶ ಚಿನ್ನಣ್ಣನವರ ನಾಮಪತ್ರ ಸಲ್ಲಿಸಿದ್ದರು.

ಚುನಾವಣೆ ನಡೆದ ಸಂದರ್ಭದಲ್ಲಿ ಕೋಡಿಹಳ್ಳಿ ಎನ್ನುವ ನಿರ್ದೇಶಕರು ಗೈರಾಗಿದ್ದರು. ಮತಗಳ ಚಲಾವಣೆಯ ಸಂದರ್ಭದಲ್ಲಿ ರುದ್ರೇಶ ಚಿನ್ನಣ್ಣನವರಿಗೆ 7 ಮತಗಳ ಬಂದವು. ಮಲ್ಲಿಕಾರ್ಜುನ ಹಾವೇರಿ ಅವರಿಗೆ 8 ಮತಗಳು ಬಂದವು.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಅಭ್ಯರ್ಥಿ ಸಣ್ಣಪ್ಪ ಮಾಳಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಮುದಿಗೌಡ್ರ ನಾಮಪತ್ರ ಸಲ್ಲಿಸಿದ್ದರು. ಮಾಳಿ ಅವರಿಗೆ 9 ಮತಗಳು ಬಂದವು. ಮುದಿಗೌಡ್ರಿ ಅವರಿಗೆ 6 ಮತಗಳು ಬಂದವು. ಉಪಾಧ್ಯಕ್ಷರಾಗಿ ಮಾಳಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ತಹಶೀಲ್ದಾರ್‌ ಶಂಕರ್‌ ಕರ್ತವ್ಯ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT