ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ | ಗಾಂಜಾ ಮಾರಾಟ: ಆರೋಪಿ ಬಂಧನ

Published 15 ಏಪ್ರಿಲ್ 2024, 2:51 IST
Last Updated 15 ಏಪ್ರಿಲ್ 2024, 2:51 IST
ಅಕ್ಷರ ಗಾತ್ರ

ಹಾವೇರಿ: ಸವಣೂರ ಪಟ್ಟಣದ ಸವಣೂರ-ಲಕ್ಷ್ಮೀಶ್ವರ ರಸ್ತೆಯಲ್ಲಿರುವ ಪ್ರವಾಸಿ ಮಂದಿರದ ಮುಖ್ಯ ದ್ವಾರದ ಹೊರಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸವಣೂರು ಪಟ್ಟಣದ ಮಂಗಳವಾರ ಪೇಟೆಯ ಮಳೆಮಲ್ಲಯ್ಯ ಕನವಳ್ಳಿಮಠ (25) ಬಂಧಿತ ಆರೋಪಿ.

ಈತನಿಂದ ₹20 ಸಾವಿರ ಮೌಲ್ಯದ 1204 ಗ್ರಾಂ ಹೂವು, ಮೊಗ್ಗು ಬೀಜ ಮಿಶ್ರಿತ ಗಾಂಜಾ ಹಾಗೂ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಜಪ್ತಿ ಮಾಡಿದ್ದಾರೆ.

ಇನ್ ಸ್ಪೆಕ್ಟರ್ ಶಿವಶಂಕರ ಗಣಾಚಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT