ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ವಿದ್ಯುತ್‌ ತಂತಿ ಎಳೆಯುವಾಗ ಕಾರ್ಮಿಕ ಸಾವು

Published 17 ಫೆಬ್ರುವರಿ 2024, 15:41 IST
Last Updated 17 ಫೆಬ್ರುವರಿ 2024, 15:41 IST
ಅಕ್ಷರ ಗಾತ್ರ

ಹಾವೇರಿ: ವಿದ್ಯುತ್‌ ತಂತಿ ಎಳೆಯುವ ಸಂದರ್ಭ ಏಕಾಏಕಿ ವಿದ್ಯುತ್‌ ಪ್ರವಹಿಸಿದ ಪರಿಣಾಮ ಗುತ್ತಿಗೆ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ನಗರದ ಮಣಿಗಾರ ಓಣಿಯಲ್ಲಿ ಶನಿವಾರ ನಡೆದಿದೆ. 

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಹೂವಿನಶಿಗ್ಲಿ ಗ್ರಾಮದವರಾದ ಸುರೇಶ್‌ ವಿದ್ಯುತ್ ತಂತಿಯ ಮೇಲೆ ನೇತಾಡುತ್ತಾ ಪ್ರಾಣ ಬಿಟ್ಟಿದ್ದಾರೆ. ನಿಂಗಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಹಾವೇರಿ ನಗರದ ಮಣಿಗಾರ ಓಣಿಯಲ್ಲಿ ಶನಿವಾರ ನಗರಸಭೆಯ ಕೊಳವೆಬಾವಿಗೆ ತ್ರಿಫೇಸ್‌ ತಂತಿ ಅಳವಡಿಸುವ ಸಂದರ್ಭ ಈ ಅವಘಡ ಸಂಭವಿಸಿದೆ. 

ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮತ್ತು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಭೇಟಿ ನೀಡಿ, ಮಾಹಿತಿ ಪಡೆದರು. ಹಾವೇರಿ ನಗರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಮತ್ತು ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

₹5 ಲಕ್ಷ ಪರಿಹಾರ: ಸಚಿವ 

ವಿದ್ಯುತ್‌ ಅವಘಡದಲ್ಲಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಮತ್ತು ಗಾಯಾಳುವಿಗೆ ₹1 ಲಕ್ಷ ಪರಿಹಾರ ಕೊಡುತ್ತೇವೆ. ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಂದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು. 

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿಗೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗುವುದು. ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT