ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

Published 22 ಆಗಸ್ಟ್ 2023, 14:00 IST
Last Updated 22 ಆಗಸ್ಟ್ 2023, 14:00 IST
ಅಕ್ಷರ ಗಾತ್ರ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಸ್ಪಾಕ್‌ ಚಮನಸಾಬ್‌ ಕೋಟಿ ಎಂಬಾತನಿಗೆ ವಿಶೇಷ ಸೆಷನ್ಸ್‌ ನ್ಯಾಯಾಲಯದ (ಎಫ್.ಟಿ.ಎಸ್.ಸಿ-1) ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.60 ಲಕ್ಷ ದಂಡ ವಿಧಿಸಿದ್ದಾರೆ.  

ಅಸ್ಪಾಕ ಚಮನಸಾಬ ಕೋಟಿ  17 ಅಕ್ಟೋಬರ್ 2017ರಂದು ಬಾಲಕಿಯು ತನ್ನ ಜಮೀನಿನಲ್ಲಿ ಒಬ್ಬಳೇ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಪುಸಲಾಯಿಸಿ ಬಾಲಕಿಯ ಇಚ್ಚೆಯ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಗ್ಗೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹಾನಗಲ್ ವೃತ್ತದ ತನಿಖಾಧಿಕಾರಿ ಸಿಪಿಐ ಎಸ್.ಆರ್.ಗಣಾಚಾರಿ ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT