ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್: ಕನ್ನಡ ನಾಮಫಲಕ ಅಳವಡಿಕೆಗೆ ಒತ್ತಾಯ

Published 12 ಮಾರ್ಚ್ 2024, 15:48 IST
Last Updated 12 ಮಾರ್ಚ್ 2024, 15:48 IST
ಅಕ್ಷರ ಗಾತ್ರ

ಹಾನಗಲ್: ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಮಂಗಳವಾರ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇವೆ ವತಿಯಿಂದ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿ ಮತ್ತು ಪುರಸಭೆ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.

ಕನ್ನಡ ಪರ ಸಂಘಟನೆಗಳ ಹಲವಾರು ವರ್ಷಗಳ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕಡ್ಡಾಯವಾಗಿ ಶೇ60 ರಷ್ಟು ಕನ್ನಡ ಬಳಸಿ ನಾಮಫಲಕ ಅಳವಡಿಕೆಗೆ ಆದೇಶ ಹೊರಡಿಸಿದೆ. ಹಾನಗಲ್ ಪಟ್ಟಣ ಮತ್ತು ತಾಲ್ಲೂಕಿನ ಪ್ರಮುಖ ಗ್ರಾಮಗಳಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕ ಕನ್ನಡ ಬಳಕೆಯ ಸರ್ಕಾರದ ಮಾರ್ಗಸೂಚಿ ಪಾಲನೆ ಕಾಣುತ್ತಿಲ್ಲ.

15 ದಿನಗಳ ಒಳಗಾಗಿ ಶೇ60 ರಷ್ಟು ಕನ್ನಡ ಪದ ಬಳಕೆಯ ನಾಮಫಲಕ ಬಳಸದಿದ್ದರೆ, ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಅಂತಹ ನಾಮಫಲಕಗಳಿಗೆ ಮಸಿ ಬಳಿಯುವ ಅಭಿಯಾನ ಹಮ್ಮಿಕೊಳ್ಳುತ್ತೇವೆ’ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಸ್ವಾಭಿಮಾನ ಬಣದ ಜಿಲ್ಲಾ ಘಟಕದ ಅಧ್ಯಕ್ಷ ರಾಮು ತಳವಾರ, ಗೌರವಾಧ್ಯಕ್ಷ ಎಂ.ಕೆ.ತಿಮ್ಮಾಪೂರ, ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ಮುದಿಗೌಡ್ರ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಸುಮಾ, ಉಪಾಧ್ಯಕ್ಷೆ ಪ್ರೇಮಾ ಮುದಿಗೌಡ್ರ, ಗೀತಾ ಹಳಕೊಪ್ಪ, ಅರ್ಬಾಜ್ ಇನಾಂದಾರ್, ಪವನ ಹರಿಜನ, ರೋಶನ್‌ಬೇಗ್ ಸವಣೂರ, ಬಸವರಾಜ ಬಸಾಪೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT