ಹಾನಗಲ್: ‘ಶ್ರೀನಿವಾಸ ಮಾನೆ ಅವರಿಗೆ ಟಿಕೆಟ್ ಪೈನಲ್ ಆಗಿದೆ. ಕಾಂಗ್ರೆಸ್ ವರಿಷ್ಠರಿಂದ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಎರಡು ದಿನಗಳಲ್ಲಿ ಶ್ರೀನಿವಾಸ ಮಾನೆ ಹಾನಗಲ್ಗೆ ಬರಲಿದ್ದಾರೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುಟ್ಟಪ್ಪ ನರೇಗಲ್ ಹೇಳಿದರು.

ಶ್ರೀನಿವಾಸ ಮಾನೆ ಮತ್ತು ಮನೋಹರ ತಹಶೀಲ್ದಾರ್ ಸಂಧಾನ ಸಫಲವಾಗಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಸಿಕ್ಕಂತಾಗಿದೆ. ಸಂಘಟನೆ ದೃಷ್ಟಿಯಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಸದೃಢವಾಗಿದೆ ಎಂದು ಶನಿವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷದ ನಾಯಕರಲ್ಲಿ ಭಿನ್ನಾಭಿಪ್ರಾಯ ಶಮನವಾಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಆಂತರಿಕ ಪ್ರಜಾಪ್ರಭುತ್ವ ನಮ್ಮಲ್ಲಿದೆ. ಉಪ ಚುನಾವಣೆಗೆ ಆಕಾಂಕ್ಷಿತರು ಅಧಿಕವಾಗುವುದು ಸಹಜ ಎಂದರು.

ಈಗಾಗಲೇ ಸಾಕಷ್ಟು ಗ್ರಾಮಗಳಲ್ಲಿ ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರ ಸಭೆಗಳನ್ನು ಮಾಡಿದ್ದೇವೆ. ವ್ಯವಸ್ಥಿತ ಚುನಾವಣಾ ಪ್ರಚಾರಕ್ಕಾಗಿ ಪ್ರತಿಯೊಂದು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ತಂಡ ರಚಿಸಲಾಗಿದೆ. ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಪ್ರಚಾರ ಸಮಿತಿಗಳು ಸಿದ್ಧಗೊಂಡಿವೆ. ಪ್ರಚಾರ ಕಾರ್ಯಕ್ಕಾಗಿ ಆಗಮಿಸುವ ತಾರಾ ಪ್ರಚಾಕರುಮಾರ್ಗದರ್ಶಿಯಾಗಿ ವಿವಿಧ ಸಮಿತಿಗಳು ಕೆಲಸ ಮಾಡಲಿವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.