ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪಾಲ ಆರೋಗ್ಯ ಕಾರ್ಡ್:‌ ನೋಂದಣಿ ಅವಧಿ ವಿಸ್ತರಣೆ

Last Updated 11 ನವೆಂಬರ್ 2020, 15:16 IST
ಅಕ್ಷರ ಗಾತ್ರ

ಹಾವೇರಿ:ಮಣಿಪಾಲ ಆರೋಗ್ಯಕಾರ್ಡ್ 2020ರ ನೋಂದಣಿಯನ್ನು ಸಾರ್ವಜನಿಕ ಬೇಡಿಕೆಯ ಮೇರೆಗೆ ನ.30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್‌ ಶೆಟ್ಟಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 20ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್‌ಗಳನ್ನು ಸುಲಭವಾಗಿ ನೋಂದಣಿ ಮಾಡಲು ಸರಳ ಹಾಗೂ ಪೂರ್ವಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡ್ ಅನ್ನು ಪರಿಚಯಿಸಿದ್ದೇವೆ. ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಕಾರ್ಡುದಾರರಿಗೆ ಸ್ಥಳದಲ್ಲೇ ನೀಡಲಾಗುವುದು ಎಂದು ಹೇಳಿದರು.

ಒಂದು ವರ್ಷ ಮತ್ತು ಎರಡು ವರ್ಷಗಳ ಯೋಜನೆಯ ಜೊತೆಗೆ ಕಟೀಲಿನ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯನ್ನು ನೆಟ್‌ ವರ್ಕ್‌ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹250, ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 500 ಮತ್ತು ‘ಕುಟುಂಬ ಪ್ಲಸ್’ ಯೋಜನೆಗೆ ಅಂದರೆ ₹650 ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮಣಿಪಾಲ ಆರೋಗ್ಯ ಕಾರ್ಡ್ ಉಪಯೋಗಿಸಿ, ವೈದ್ಯರ ಸಮಾಲೋಚನೆ ಶೇ 50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆ ಶೇ 30 ರಿಯಾಯಿತಿ, ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ 25 ರಿಯಾಯಿತಿ, ಔಷಧಾಲಯಗಳಲ್ಲಿ ಶೇ 12ರವರೆಗೆ ರಿಯಾಯಿತಿ ಮುಂತಾದ ಸೌಲಭ್ಯ ಪಡೆಯಬಹುದು. ಮಾಹಿತಿ ಮತ್ತು ನೋಂದಣಿಗೆ 95387 90505 ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಸ್ತೂರಬಾ ಆಸ್ಪತ್ರೆ ಮಣಿಪಾಲದ ಹಿರಿಯ ವ್ಯವಸ್ಥಾಪಕ ಸಚಿನ್ ಕಾರಂತ್, ಸಹಾಯಕ ವ್ಯವಸ್ಥಾಪಕ ಕೃಷ್ಣಪ್ರಸಾದ್ ಬಿ.ಎಸ್ ಮತ್ತು ಮಾರುಕಟ್ಟೆ ವಿಭಾಗದ ಪ್ರತಿನಿಧಿ ಅನಿಲ್ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT