ಗುರುವಾರ , ಜನವರಿ 21, 2021
30 °C

‘ಮರಾಠ ಅಭಿವೃದ್ಧಿ ನಿಗಮ’ ರಚನೆ ಸ್ವಾಗತಾರ್ಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ರಾಜ್ಯದ ಕನ್ನಡಿಗ ಮರಾಠ ಸಮುದಾಯದವರ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ‘ಮರಾಠ ಅಭಿವೃದ್ಧಿ ನಿಗಮ’ ಸ್ಥಾಪನೆ ಮಾಡಿರುವುದನ್ನು ಜಿಲ್ಲಾ ಮರಾಠ ಸಮಾಜ ಸ್ವಾಗತಿಸುತ್ತದೆ ಹಾಗೂ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಮರಾಠ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎನ್ ವೆಂಕೋಜಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾಷೆ ಮತ್ತು ಜನಾಂಗದ ಬಗ್ಗೆ ತಿಳಿಯದೇ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ನಾವು ಕನ್ನಡ ಮಾಧ್ಯಮದಲ್ಲಿ ಕಲಿತು, ಕನ್ನಡ ನಾಡು– ನುಡಿ ಹಾಗೂ ಜಲದ ಬಗ್ಗೆ ಅಪಾರ ಅಭಿಮಾನ ಹೊಂದಿದ್ದೇವೆ. ಕನ್ನಡ ನಾಡು ರಕ್ಷಣೆ ಮಾಡಲು ಮುಂದಾಗಿದ್ದೇವೆ ಎಂದರು. 

ಹಲವಾರು ವರ್ಷಗಳಿಂದ ಮರಾಠ ಸಮಾಜವನ್ನು ‘3ಬಿ’ ಯಿಂದ ‘2ಎ’ ವರ್ಗಕ್ಕೆ ಸೇರ್ಪಡೆ ಮಾಡಿ ಎಂದು ಹೋರಾಟ ಮಾಡುತ್ತಾ ಬಂದಿದ್ದೇವೆ. ರಾಜ್ಯ ಸರ್ಕಾರ ಈ ಬೇಡಿಕೆಯನ್ನು ಈಡೇರಿಸಬೇಕು ಎಂದು ಎಂದು ಎಂ.ಎನ್ ವೆಂಕೋಜಿ ಸರ್ಕಾರವನ್ನು ಒತ್ತಾಯಿಸಿದರು.

ಮುಖಂಡ ಸುಭಾಸ ಚವ್ಹಾಣ ಮಾತನಾಡಿ, ಕನ್ನಡ ನಾಡು ನುಡಿಗಾಗಿ ಹೋರಾಟ ಮಾಡುವರನ್ನು ಸ್ವಾಗತಿಸುತ್ತೇವೆ. ಆದರೆ, ಕನ್ನಡದ ಹೆಸರಿನಲ್ಲಿ ಲೂಟಿ ಮಾಡುತ್ತಿರುವ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಿ. ಡಿ.5ರಂದು ರಾಜ್ಯ ಬಂದ್ ಮಾಡದೇ ನಮ್ಮ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡಿ ಎಂದು ವಿನಂತಿಸಿಕೊಂಡರು.

ವಕೀಲ ಪ್ರಕಾಶ ಮುಂಜೋಜಿ, ಮುಖಂಡರಾದ ಉಮೇಶ ವಾಘ, ರಾಜು ಗೌಳಿ, ಜಗದೀಶ ಶಿಂಧೆ, ಕೆ.ವೈ. ಬಾಜರಾಯರು, ಡಿ.ಎಲ್. ಜಗತಾಫ್, ಶ್ರೀನಿವಾಸ್, ದತ್ತಾತ್ರಯ ಘಾಟಗೆ ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.