ಮಂಗಳವಾರ, ಮೇ 11, 2021
27 °C

ಮಾಸ್ಕ್‌ ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕೋವಿಡ್‌–19 ಎರಡನೇ ಅಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್, ಉಪ ವಿಭಾಗ ಹಾಗೂ ಶಹರ ಪೊಲೀಸ್ ಠಾಣೆ  ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ‘ಮಾಸ್ಕ್ ಜಾಗೃತಿ ಜಾಥಾ’ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಚಾಲನೆ ನೀಡಿದರು.

ನಗರದ ಹೊಸಮನಿ ಸಿದ್ದಪ್ಪ ವೃತ್ತದಿಂದ ಆರಂಭವಾದ ಜಾಥಾ ಮೈಲಾರ ಮಹದೇವಪ್ಪ ವೃತ್ತ, ಗಾಂಧಿ ವೃತ್ತ, ಎಂ.ಜಿ.ರಸ್ತೆ, ಮೇಲಿನಪೇಟೆ, ಸುಭಾಸ್ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಸಾರ್ವಜನಿಕರಿಗೆ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಮಾಸ್ಕ್ ಧಾರಣೆ ಕುರಿತು ಜಾಗೃತಿ ಮೂಡಿಸಲಾಯಿತು.

ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಯಿತು ಹಾಗೂ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು. ಹೆಚ್ಚುವರಿ ಎಸ್ಪಿ ವಿಜಯಕುಮಾರ ಸಂತೋಷ್, ಡಿ.ವೈ.ಎಸ್.ಪಿ. ಶಂಕರ ಮಾರಿಹಾಳ, ಶಹರ ಪೊಲೀಸ್ ಠಾಣೆ ಸಿಪಿಐ ಪ್ರಹ್ಲಾದ ಚನ್ನಗಿರಿ, ಸಂಚಾರಿ ಪೊಲೀಸ್ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ಬಿ.ಎ. ಬೆಟಗೇರಿ ಹಾಗೂ ಜಿ.ಬಿ.ನಾವಿ, ಆರ್.ಪಿ.ಐ ಮಾರುತಿ ಹೆಗಡೆ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ತಹಶೀಲ್ದಾರ್‌ ಗಿರೀಶ ಸ್ವಾದಿ, ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ ಜಾಥಾದಲ್ಲಿ ಭಾಗವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.