ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಮಾಸ್ಕ್‌ ವಿತರಣೆ

Last Updated 27 ಏಪ್ರಿಲ್ 2021, 13:26 IST
ಅಕ್ಷರ ಗಾತ್ರ

ಸವಣೂರ: ಕೊರೊನಾ ಸೋಂಕು ನಿಯಂತ್ರಿಸಲು ಪ್ರತಿಯೊಬ್ಬರೂ ಮನೆಯಲ್ಲಿಯೇ ಉಳಿಯಬೇಕು. ಅನಾವಶ್ಯಕವಾಗಿ ಓಡಾಡದೆ, ಅಗತ್ಯವಿದ್ದಾಗ ಮಾಸ್ಕ್‌ ಧರಿಸಿ ಹೊರಬಂದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಾರಪ್ಪ ತಳ್ಳಿಹಳ್ಳಿ ಹೇಳಿದರು.

ತಾಲ್ಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ವ್ಯಾಪಾರಸ್ಥರಿಗೆ, ಸಾರ್ವಜನಿಕರಿಗೆ ಒಬಿಸಿ ಮೋರ್ಚಾ ತಾಲ್ಲೂಕು ಘಟಕದ ವತಿಯಿಂದ ಮಾಸ್ಕ್‌ ವಿತರಿಸಿ ಅವರು ಮಾತನಾಡಿದರು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಕೆಲವು ನಿಯಮಗಳನ್ನು ಜಾರಿಗೆ ತಂದಿದೆ. ಸಾಂಕ್ರಾಮಿಕ ಸೋಂಕನ್ನು ತಡೆಗಟ್ಟಲು ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರ ಸಹ ಅಗತ್ಯವಾಗಿದೆ ಎಂದರು.

ತಾಲ್ಲೂಕು ಘಟಕ ಅಧ್ಯಕ್ಷ ಹೊನ್ನಪ್ಪ ಕೊಳ್ಳವರ, ಕೋವಿಡ್-19 ಸಾಂಕ್ರಾಮಿಕ ರೋಗ ಮೊದಲನೇ ಹಂತಕ್ಕಿಂತ 2ನೇ ಹಂತದದಲ್ಲಿ ಬಲಿಷ್ಠವಾಗಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದನ್ನು ನಿಯಂತ್ರಿಸಲು ಸಾರ್ವಜನಿಕರು ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಬಳಸಿ, ಅಂತರ ಕಾಯ್ದುಕೊಳ್ಳುವುದು ಅಗತ್ಯ ಎಂದು ಹೇಳಿದರು.

ಮಂಜುನಾಥ ಫಕ್ಕಿರೇಶ, ಗುಡ್ಡಪ್ಪ ತಿಮ್ಮಾಪೂರ, ಮಾನೇಗಾರ, ವೀರಯ್ಯ ಸಂಕಿನಮಠ, ಮೈಲಾರಿ ಬಂಕಾಪುರ, ಈರಣ್ಣ ಯಲಿಗಾರ, ಈರಪ್ಪ ಕೂಡಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT