ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ

Last Updated 14 ಮೇ 2020, 15:50 IST
ಅಕ್ಷರ ಗಾತ್ರ

ಹಾವೇರಿ: ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಹಾವೇರಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ 3,400 ಮಾಸ್ಕ್‌ಗಳನ್ನು ಹಾಗೂ ರಾಣೇಬೆನ್ನೂರ ತಾಲ್ಲೂಕಿನ ವಿದ್ಯಾರ್ಥಿಗಳಿಗೆ 10 ಸಾವಿರ ಮಾಸ್ಕ್‌ಗಳನ್ನು ದಾನಿಗಳು ಉಚಿತವಾಗಿ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ತಿಳಿಸಿದ್ದಾರೆ.

ಹಾವೇರಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಸಾಯಿಶಕ್ತಿ ಡೆವಲಪರ್ಸ್‍ನ ರಾಜಶೇಖರ ಪಾಟೀಲ ಹಾಗೂ ಅವರ ಪತ್ನಿ ಪಾರ್ವತಿ ಪಾಟೀಲ ಅವರು ಹಾಗೂ ರಾಣೇಬೆನ್ನೂರು ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಆರೇಮಲ್ಲಾಪೂರ ಸ್ವಾಮೀಜಿ ಅವರು ಮಾಸ್ಕ್‌ಗಳನ್ನು ಉಚಿತವಾಗಿ ನೀಡಿದ್ದಾರೆ.

ಜಿಲ್ಲೆಯ ಇತರ ತಾಲ್ಲೂಕಿನ ಎಸ್.ಎಸ್.ಎಲ್.ಸಿ.ಮಕ್ಕಳಿಗೂ ದಾನಿಗಳು ಮಾಸ್ಕ್ ಹಾಗೂ ಸ್ಯಾನಿಟೈಸರ್ ಒದಗಿಸಲು ಮುಂದೆ ಬಂದಲ್ಲಿ ಅವುಗಳನ್ನು ಮಕ್ಕಳಿಗೆ ವಿತರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಬಿಇಒ ಎಂ.ಎಚ್.ಪಾಟೀಲ ಹಾಗೂ ಮುಖ್ಯ ಶಿಕ್ಷಕ ಎಸ್.ಜಿ.ಕೋಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT