ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಡಗಿ | ‘ಸಾಮೂಹಿಕ ವಿವಾಹ; ದುಂದುವೆಚ್ಚಕ್ಕೆ ಕಡಿವಾಣ’

Published 19 ಫೆಬ್ರುವರಿ 2024, 15:46 IST
Last Updated 19 ಫೆಬ್ರುವರಿ 2024, 15:46 IST
ಅಕ್ಷರ ಗಾತ್ರ

ಬ್ಯಾಡಗಿ: ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿಯ ಬದುಕು, ಪರಸ್ಪರ ಪ್ರೀತಿ ವಿಶ್ವಾಸ ವೃದ್ಧಿಸಲಿದೆ ಎಂದು ವೇದಮೂರ್ತಿ ರಾಚಯ್ಯ ಓದಿಸೋಮಠ ಹೇಳಿದರು.

ಪಟ್ಟಣದ ವೀರಭದ್ರೇಶ್ವರ ಹಾಗೂ ಕಲ್ಮೇಶ್ವರ ದೇವಸ್ಥಾನಗಳ 69ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲರೂ ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಬೇಕಾಗಿದೆ. ಸಮಾಜವನ್ನು ಕಾಡುತ್ತಿರುವ ವರದಕ್ಷಿಣಿ ನಿರ್ಮೂಲನೆಗೆ ಎಲ್ಲರೂ ಸಂಕಲ್ಪ ಮಾಡಬೇಕಾಗಿದೆ ಎಂದರು.

ಜಾತ್ರಾ ಸಮಿತಿ ಅಧ್ಯಕ್ಷ ಮಲ್ಲಣ್ಣ ಹುಚಗೊಂಡರ ಮಾತನಾಡಿ, ಸಮಾಜದಲ್ಲಿ ಆರ್ಥಿಕ ಹೊರೆಯಿಂದ ಬಳಲುತ್ತಿರುವ ಕುಟುಂಬಗಳ ಹಿತ ಕಾಯಲು ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಸಾಮೂಹಿಕ ವಿವಾಹ ನೆರವೇರಿಸಗುತ್ತದೆ ಎಂದರು.

ಕಾರ್ಯದರ್ಶಿ ಮಾಲತೇಶ ಅರಳಿಮಟ್ಟಿ ಮತನಾಡಿ, ಇಂದಿನ ದುಬಾರಿ ಕಾಲದಲ್ಲಿ ಮನೆ ಕಟ್ಟುವುದು, ಮದುವೆ ಮಾಡುವುದು ಬಹಳ ಕಷ್ಟ. ಮದುವೆ ಸಾಲದಿಂದ ಎಷ್ಟೋ ಕುಟುಂಬಗಳು ವಿಘಟಿತವಾಗುತ್ತಿವೆ. ಇದನ್ನು ಮನಗಂಡು ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಖಜಾಂಚಿ ಶಂಭುಲಿಂಗಪ್ಪ ಅಂಗಡಿ, ಸದಸ್ಯರಾದ ಚಂದ್ರಶೇಖರಯ್ಯ ಆಳದಗೇರಿ, ಶಿವಣ್ಣ ಶೆಟ್ಟರ, ಗಂಗಾಧರ ತಿಳವಳ್ಳಿ ಶಿವಣ್ಣ ಬಣಕಾರ, ಧಾರ್ಮಿಕ ಪಾಠಶಾಲೆಯ ವಠುಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT