ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೆಚ್ಚಿಸಲು ಬೃಹತ್‌ ಪ್ರತಿಭಟನೆ

ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀಗಳ ಹೋರಾಟಕ್ಕೆ ಬೆಂಬಲ
Last Updated 25 ಮೇ 2022, 14:34 IST
ಅಕ್ಷರ ಗಾತ್ರ

ಹಾವೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯ ಕಾರ್ಯಕರ್ತರು ನಗರದಲ್ಲಿ ಬುಧವಾರಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಸ್‍ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ 105 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀಗಳ ಹೋರಾಟ ಬೆಂಬಲಿಸಿ, ‌ಇಲ್ಲಿನ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

ಇಲ್ಲಿನ ಮುರುಘಾ ಮಠದಿಂದ ಸಿದ್ದಪ್ಪವೃತ್ತದವರೆಗೆ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಮುಖಂಡರು ಹಾಗೂ ಪದಾಧಿಕಾರಿಗಳು, ಸಾರ್ವಜನಿಕರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪರಿಶಿಷ್ಟ ಜಾತಿಯವರಿಗೆ ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆಗೆ ಅನುಗುಣವಾಗಿ ಶೇಕಡಾ 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇಕಡಾ 3ರಿಂದ ಶೇಕಡಾ 7.5ರಷ್ಟು ಹೆಚ್ಚಿಸಬೇಕು. ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಏಕ ಸದಸ್ಯ ಆಯೋಗದ ವರದಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಆನವಟ್ಟಿ ಮಾತನಾಡಿ, ‘ಮೀಸಲಾತಿ ಹೆಚ್ಚಳ ಮಾಡದ ಕಾರಣ, ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಹಾಗೂ ನಿರುದ್ಯೋಗಿಗಳಿಗೆ ಅನೇಕ ವರ್ಷಗಳಿಂದ ದೊಡ್ಡ ಅನ್ಯಾಯವಾಗಿದೆ. ಕೂಡಲೇ ಸರ್ಕಾರ ನಮ್ಮ ಬೇಡಿಕೆ ಈಡೇರಿಸಬೇಕು.ಬೇಡಿಕೆಯನ್ನು ಈಡೇರಿಸದೇ ಹೋದರೆ ಮುಂಬರುವ ಚುನಾವಣೆಯಲ್ಲಿ ತಕ್ಕಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.

ಮುಖಂಡ ಅಶೋಕ ಹರನಗಿರಿ,ದಲಿತ ಮುಖಂಡರಾದ ಈರಪ್ಪ ಲಮಾಣಿ, ಸಂಜಯಗಾಂಧಿ ಸಂಜೀವಣ್ಣನವರ, ಉಡಚಪ್ಪ ಮಾಳಗಿ, ಅಶೋಕ ತಳವಾರ, ಬಸವರಾಜ ಹಾದಿಮನಿ, ದಾಸಪ್ಪ ಕರ್ಜಗಿ, ಹೊನ್ನಪ್ಪ ಮಾಳಗಿ, ರಮೇಶ ಜಾಲಿಹಾಳ, ನಿಂಗಪ್ಪ ಗಾಳೆಮ್ಮನವರ, ಲವೇಶ ಸೋಮನಕಟ್ಟಿ, ಸುಭಾಸ್ ಬೆಂಗಳೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT