ಹಾವೇರಿ: ‘ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆ.19ರಂದು ಮೆಗಾ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ದೃಶ್ಯ ಸಂವಾದ ಮೂಲಕ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಕಾನೂನುಬದ್ಧವಾಗಿ ರಾಜಿ ಸಂಧಾನವಾಗಲು ಅವಕಾಶವಿರುವ ಎಲ್ಲ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಕೊಳ್ಳಬಹುದಾಗಿದೆ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಎಚ್.ರೇಣುಕಾದೇವಿ ತಿಳಿಸಿದ್ದಾರೆ.

ನಗರದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ಇ-ಲೋಕ ಅದಾಲತ್ ಕುರಿತ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಹಿನ್ನೆಲೆಯಲ್ಲಿ ಮೆಗಾ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಂದು ಇ-ಲೋಕ ಅದಾಲತ್‍ಗೆ ಪ್ರತ್ಯೇಕವಾಗಿ ಒಬ್ಬರು ನ್ಯಾಯಾಧೀಶರು ಹಾಗೂ ನುರಿತ ನ್ಯಾಯವಾದಿಗಳು ಸಂಧಾನಕಾರರಾಗಿ ಕಾರ್ಯನಿರ್ವಹಿಸುತ್ತಾರೆ.ಇ- ಲೋಕ ಅದಾಲತ್‍ನಲ್ಲಿ ಇತ್ಯರ್ಥವಾದ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲ್ಲಿ ಎರಡು ಕಡೆಯ ಪಕ್ಷಗಾರರು ತಮ್ಮ ವ್ಯಾಜ್ಯಗಳಿಗೆ ಸೌಹಾರ್ದಯುತವಾಗಿ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎ.ವಿ. ಪಾಟೀಲ, ಜಿಲ್ಲಾ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿ.ಆರ್.ಗುಡಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮೀ ಎನ್.ಗರಗ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿ.ವೈ.ಎಸ್.ಪಿ. ವಿಜಯಕುಮಾರ ಸಂತೋಷ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.