ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರವಧನ ಬಿಡುಗಡೆಗೆ ಮನವಿ

Last Updated 19 ಸೆಪ್ಟೆಂಬರ್ 2021, 16:39 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಅಕ್ಷರ ದಾಸೋಹ ಯೋಜನೆಯ ಸಿಬ್ಬಂದಿಗೆ ಮಾಸಿಕವೇತನ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿಯ ಪದಾಧಿಕಾರಿಗಳು ಭಾನುವಾರ ತಾಲ್ಲೂಕಿನ ದೇವರಗುಡ್ಡದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಘಟಕದ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಮಾತನಾಡಿ, 19 ವರ್ಷಗಳಿಂದ ಕನಿಷ್ಠ ವೇತನವಿಲ್ಲದೆ ಸಾಮಾಜಿಕ ಭದ್ರತೆ, ಪಿಂಚಣಿ ಸೌಲಭ್ಯಗಳಿಲ್ಲದೆ, ಕಡಿಮೆ ಸಂಭಾವನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈಗಿನ ಸಂಭಾವನೆಯಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಜೂನ್, ಜುಲೈ, ಆಗಸ್ಟ್ ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಕೋರಿದರು.

ಜೆ.ಡಿ.ಪೂಜಾರ, ಲಲಿತಾ ಬುಸೆಟ್ಟಿ, ರಾಜೇಶ್ವರಿ ದೊಡ್ಡಮನಿ, ನಾಗರತ್ನ ಕುಲಕರ್ಣಿ , ಪಾರ್ವತಿ, ಶಿವನಾಗಮ್ಮ ಮಕರಿ, ಶೀಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT