ಹಾವೇರಿ: ಬಸ್ ನಿಲ್ದಾಣ, ರೈಲು ನಿಲ್ದಾಣ, ಪ್ರಮುಖ ರಸ್ತೆಗಳು, ಇತರೆ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಓಡಾಡುವ ಮಾನಸಿಕ ರೋಗಿಗಳನ್ನು ಹಾಗೂ ಯಾವುದಾದರೂ ಕುಟುಂಬದಲ್ಲಿರುವ ವ್ಯಕ್ತಿಗಳು ಮಾನಸಿಕ ರೋಗಕ್ಕೆ ತುತ್ತಾದರೆ ಅಂಥವರ ಆರೈಕೆ ಬಗ್ಗೆ ಕಾಳಜಿ ವಹಿಸಲು ಜಿಲ್ಲಾಸ್ಪತ್ರೆಯಲ್ಲಿ ‘ಮಾನಸಿಕ ವಿಮರ್ಶೆ ಕೇಂದ್ರ’ ಆರಂಭಿಸಲಾಗಿದೆ.

ನಗರದ ಜಿಲ್ಲಾ ಆಸ್ಪತ್ರೆ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರೂ ಆಗಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಕೇಂದ್ರ ಉದ್ಘಾಟಿಸಿದರು.

ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಕೀಲರ ಸಂಘ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್), ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ‘ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ’ ಅಂಗವಾಗಿ ಬುಧವಾರ ‘ಕಾನೂನು ಅರಿವು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಾನವೀಯತೆಯಿಂದ ವರ್ತಿಸಿ: ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನ್ಯಾಯಾಧೀಶರಾದ ಎನ್.ಎಂ. ರಮೇಶ ಮಾತನಾಡಿ, ‘ಮಾನಸಿಕ ಲಕ್ಷಣ ಕಂಡುಬಂದಾಗ, ರೋಗಿಗಳೇ ಖುದ್ದಾಗಿ ಚಿಕಿತ್ಸೆ ಪಡೆಯಲು ಬರುವುದಿಲ್ಲ. ಅದರ ಅರಿವು ಅವರಿಗೆ ಇರುವುದಿಲ್ಲ. ಅವರನ್ನು ಬೇರೆಯವರೇ ಆಸ್ಪತ್ರೆಗೆ ಕರೆದೊಯ್ಯಬೇಕು. ಕೆಲವರು ಮಾನಸಿಕ ರೋಗಿಗಳನ್ನು ಎಲ್ಲೆಂದರಲ್ಲಿ ಬಿಟ್ಟು ಹೋಗುತ್ತಾರೆ. ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಗಳಲ್ಲಿ ಇಂಥ ವ್ಯಕ್ತಿಗಳು ನಮಗೆ ಹೆಚ್ಚಾಗಿ ಕಾಣಸಿಗುತ್ತಾರೆ. ಇನ್ನುಮುಂದೆ ಎಲ್ಲಿಯಾದರೂ ಅಂಥ ಮಾನಸಿಕ ರೋಗಿಗಳು ಕಂಡುಬಂದರೆ, ಜಿಲ್ಲಾ ಆಸ್ಪತ್ರೆಯಲ್ಲಿ ಆರಂಭಿಸಲಾದ ಜಿಲ್ಲಾ ಮಾನಸಿಕ ವಿಮರ್ಶೆ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಬಹುದು’ ಎಂದು ಹೇಳಿದರು.

‘ಈ ಮೊದಲು ಅವಿಭಕ್ತ ಕುಟುಂಬಗಳಲ್ಲಿ ಅಜ್ಜ–ಅಜ್ಜಿ, ದೊಡ್ಡಪ್ಪ–ದೊಡ್ಡಮ್ಮ, ಚಿಕ್ಕಪ್ಪ–ಚಿಕ್ಕಮ್ಮ, ಅಕ್ಕ–ತಂಗಿ, ಅಣ್ಣ–ತಮ್ಮ... ಹೀಗೆ ಸಾಕಷ್ಟು ಸದಸ್ಯರಿರುತ್ತಿದ್ದರು. ಆಗ ಹಣದ ಕೊರತೆ ಇದ್ದರೂ ಪ್ರೀತಿ-ಪ್ರೇಮಕ್ಕೆ ಕೊರತೆ ಇರಲಿಲ್ಲ. ಯಾರಿಗಾದರೂ ಸಮಸ್ಯೆಯಾದರೂ ಎಲ್ಲರೂ ಬೆಂಬಲವಾಗಿ ನಿಲ್ಲುತ್ತಿದ್ದರು. ಈಗ ವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚಾಗಿದೆ. ಕೆಲಸದ ಕಾರಣಕ್ಕೆ ಗಂಡ ಒಂದು ಕಡೆ, ಹೆಂಡತಿ ಒಂದು ಕಡೆ ಹಾಗೂ ಮಗು ಮತ್ತೊಂದು ಕಡೆ ಇರುವ ಸ್ಥಿತಿಯಿದೆ. ಹಾಗಾಗಿ ಒಂಟಿತನ, ಕೆಲಸದ ಒತ್ತಡ ಹೆಚ್ಚಾಗಿ ಮನುಷ್ಯ ಖಿನ್ನತೆಗೆ ಒಳಗಾಗಿ ಮಾನಸಿಕವಾಗಿ ನೊಂದುಕೊಳ್ಳುತ್ತಿದ್ದಾನೆ. ಮಾನಸಿಕ ಕಾಯಿಲೆಯನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು’ ಎಂದರು.

1851ರಿಂದ ಕಾನೂನು ಸೇವೆ ಉಲ್ಲೇಖ: ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪಾ ಎನ್., ‘ನಮ್ಮ ಸಮಾಜದ ವ್ಯವಸ್ಥೆಯಲ್ಲಿ 1851ರಿಂದಲೇ ಕಾನೂನು ಸೇವೆಗಳ ಉಲ್ಲೇಖವಿದೆ. ಭಾರತದ ಸಂವಿಧಾನದ ಅಡಿಯಲ್ಲಿ ಹಲವು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗಿದೆ. ಹೀಗಾಗಿ, ಇಂದಿನ ಪ್ರತಿಯೊಬ್ಬರು ಕಾನೂನು ಅರಿವು ಹೊಂದಿರಬೇಕು’ ಎಂದರು.

‘ಜನರಲ್ಲಿ ಕಾನೂನು ಅರಿವು ಮೂಡಿಸಲು ರಾಷ್ಟ್ರ, ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾನೂನು ಸೇವಾ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿವೆ. ಮಹಿಳೆ, ಮಕ್ಕಳು, ಅಂಗವಿಕಲರಿಗೆ ಹಾಗೂ ಮೂರು ಲಕ್ಷ ಒಳಗೆ ಆದಾಯ ಹೊಂದಿರುವವರಿಗೆ ಕಾನೂನಿನ ಉಚಿತ ನೆರವು ನೀಡಲಾಗುವುದು. ಪ್ರಾಧಿಕಾರದಿಂದಲೇ ವಕೀಲರನ್ನು ನೇಮಕ ಮಾಡಲಾಗುವುದು. ರಾಜಿ ಸಂಧಾನಕ್ಕೆ ಸಹಾಯ ಮಾಡಲಾಗುವುದು. ರಾಜ್ಯದ ಬಹುತೇಕ ಜಿಲ್ಲೆಗಳನ್ನು ನೋಡಿದಾಗ, ಹಾವೇರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಉತ್ತಮ ಸೇವೆ ನೀಡುತ್ತಿದೆ’ ಎಂದು ಹೇಳಿದರು.

ಹಿಮ್ಸ್ ನಿರ್ದೇಶಕ ಡಾ. ಪ್ರದೀಪಕುಮಾರ ಎಂ.ವಿ. ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್. ಡಿಳ್ಳೆಪ್ಪನವರ ಉಪನ್ಯಾಸ ನೀಡಿದರು. ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ., ಆರೋಗ್ಯಾಧಿಕಾರಿ (ಪ್ರಭಾರ) ಡಾ. ಜಗದೀಶ ಪಾಟೀಲ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪಿ.ಆರ್. ಹಾವನೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.