ಮಹಿಳೆಯರ ಬಗ್ಗೆ ಎಚ್‌ಡಿಕೆ ಗೌರವಯುತವಾಗಿ ಮಾತನಾಡಲಿ: ಕೃಷಿ ಸಚಿವ

ಹಿರೇಕೆರೂರ (ಹಾವೇರಿ): ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿಯಾಗಿದ್ದು, ಸಂಸದೆ ಸುಮಲತಾ ಬಗ್ಗೆ ಈ ರೀತಿ ಲಘುವಾಗಿ ಮಾತನಾಡಿರುವುದು ಸರಿಯಲ್ಲ. ಮಹಿಳೆಯರ ಬಗ್ಗೆ ಗೌರವಯುತವಾಗಿ ಮಾತನಾಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿರುಗೇಟು ನೀಡಿದರು.
ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಈ ಹಿಂದೆ ಕೆಆರ್‌ಎಸ್ ಜಲಾಶಯ ಬಿರುಕು ಬಿಟ್ಟ ಬಗ್ಗೆ ಸುಮಲತಾ ವಿಚಾರ ಪ್ರಸ್ತಾಪ ಮಾಡಿದ್ದರು. ಆಗ ಸಚಿವರು, ಜನಪ್ರತಿನಿಧಿಗಳು ಆ ರೀತಿ ಯಾವುದೂ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆದರೆ ಕುಮಾರಸ್ವಾಮಿ ಈ ರೀತಿ ಮಾತನಾಡಬಾರದಿತ್ತು ಎಂದು ಹೇಳಿದರು.
ಸಿ.ಎಂ. ಬಗ್ಗೆ 'ಕುತ್ತಾ' ಪದ ಬಳಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಮನುಷ್ಯನ ಮಾತುಗಳು ಅವನ ಸಂಸ್ಕೃತಿ ತೋರಿಸುತ್ತವೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ರೀತಿ ಮಾತನಾಡುವುದು ಅವರ ಘನತೆಗೆ ಶೋಭೆಯಲ್ಲ ಎಂದರು.
ಇದನ್ನೂ ಓದಿ: ಕೆಆರ್ಎಸ್ಗೆ ಸುಮಲತಾನ್ನ ಅಡ್ಡಡ್ಡ ಮಲಗಿಸಿ: ಎಚ್‌ಡಿಕೆ ಹೇಳಿಕೆಗೆ ಸಂಸದೆ ಆಕ್ರೋಶ
ನಾಯಕತ್ವ ಬದಲಾವಣೆ ಕುರಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಸಂಬಂಧಿಸಿದಂತೆ, ಈಗಾಗಲೇ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ. ಇನ್ನೂ ಎರಡು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು. ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.