ಹಾವೇರಿ: ಅಲ್ಪಸಂಖ್ಯಾತ ಸಮುದಾಯದವರಿಗೆ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ತಲುಪಿಸಲು ಅಧಿಕಾರಿಗಳಿಗೆ ಬ್ಯಾಡಗಿ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಅವರು, ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕಿರುವ ಯೋಜನೆಗಳ ಮಾಹಿತಿಯನ್ನು ನೀಡುವುದರ ಜೊತೆಗೆ ಆ ಸಮುದಾಯಕ್ಕೆ ಸಕಾಲಕ್ಕೆ ಯೋಜನೆಗಳ ಲಾಭ ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರು, ವಿವಿಧ ಇಲಾಖೆಗಳ ಕಾರ್ಯಕ್ರಮಗಳಡಿ ಅಲ್ಪಸಂಖ್ಯಾತ ಸಮುದಾಯಗಳಿಗಿರುವ ಯೋಜನೆಗಳ ಅನುಷ್ಠಾನ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಅಶೋಕ್ ಗಡ್ಡಿಗೌಡ್ರ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು, ಅಧಿಕಾರೇತರ ಸದಸ್ಯರು ಸಭೆಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.