ಮಂಗಳವಾರ, ಜೂನ್ 15, 2021
21 °C

ಬೆಳೆ ಸಮೀಕ್ಷೆ ಕಾರ್ಯಕ್ಕೆ ಶಾಸಕ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದ ಹೊರವಲಯದ ಜಗದೀಶ ಮಲಗೋಡ ಅವರ ಹೊಲದಲ್ಲಿ ಶಾಸಕ ನೆಹರು ಓಲೇಕಾರ ಅವರು ಮೊಬೈಲ್‌ ಆ್ಯಪ್‌ ಮೂಲಕ ರೈತರಿಂದಲೇ ಬೆಳೆ ಸಮೀಕ್ಷೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು. 

ನಂತರ ಅವರು ಮಾತನಾಡಿ, ‘ರೈತರ ಮೂಲಕವೇ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿದೆ. ಇದೇ ಆಗಸ್ಟ್ 24ರೊಳಗಾಗಿ ಕ್ಷೇತ್ರದ ಪ್ರತಿಯೊಬ್ಬ ರೈತರು ತಮ್ಮ ಹೊಲದಲ್ಲಿರುವ ಬೆಳೆಯ ಫೋಟೋ ತೆಗೆದು ಅಪ್‌ಲೋಡ್ ‌ಮಾಡಿ ಸ್ವಯಂ ದೃಢಿಕರಿಸಿಕೊಳ್ಳಬಹುದು. ಈ ಬಗ್ಗೆ ಕೃಷಿ ಅಧಿಕಾರಿಗಳು ರೈತರಿಗೆ ಜಾಗೃತಿ ಮೂಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಸೂಚನೆ ನೀಡಿದರು. 

ಸವಣೂರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣವರ, ಹನುಮಂತಪ್ಪ ಬಂಡಿವಡ್ಡರ, ಈಶಪ್ಪ ಕೊಂಚಿಗೇರಿ, ಕೃಷಿ ತಾಲ್ಲೂಕು ಸಹಾಯಕ ನಿರ್ದೇಶಕ ರಮೇಶ ಕೆ.ಕುಡುಪಲಿ ಇದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.