ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾಮದ ಕೆರೆ ತುಂಬಿಸಲು ಕ್ರಮ: ಶಾಸಕ ರುದ್ರಪ್ಪ ಲಮಾಣಿ

Published 5 ಮಾರ್ಚ್ 2024, 16:09 IST
Last Updated 5 ಮಾರ್ಚ್ 2024, 16:09 IST
ಅಕ್ಷರ ಗಾತ್ರ

ಹಾವೇರಿ: ‘ಸರ್ಕಾರ ವಿವಿಧ ಯೋಜನೆಗಳಡಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳು ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಶಾಲೆಗೆ ಮತ್ತು ಗ್ರಾಮಕ್ಕೆ ಉತ್ತಮ ಹೆಸರು ತರಬೇಕು’ ಎಂದು ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಮಂಗಳವಾರ ಹಾವೇರಿ ತಾಲ್ಲೂಕಿನ ದೇವಗಿರಿಯಲ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2022-23ನೇ ಸಾಲಿನ ರಾಜ್ಯ ವಲಯ ವಿವೇಕ ಯೋಜನೆ ಅಡಿ ಎರಡು ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮದ ಕೆರೆ ತುಂಬಿಸುವ ಯೋಜನೆಯ ಕುರಿತು ಗ್ರಾಮಸ್ಥರು ಮನವಿ ಸಲ್ಲಿಸಿದ್ದು, ಆ ಕುರಿತು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಾವೇರಿ ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ್, ಉಪಾಧ್ಯಕ್ಷೆ ಶಿವಲೀಲಾ ತಿರಕಣ್ಣನವರ, ಎಸ್‌ಡಿಎಂಸಿ ಅಧ್ಯಕ್ಷ ಹಾಲಪ್ಪ ಭಂಡಾರಿ, ಉಪಾಧ್ಯಕ್ಷ ನಂದಪ್ಪ ಲಮಾಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿತಾ ಗರಡಿ ಇದ್ದರು. 

ಮುಖ್ಯೋಪಾಧ್ಯಾಯ ಎ.ಪಿ.ಗಡ್ಡದ ಸ್ವಾಗತಿಸಿದರು. ಎಸ್.ಬಿ.ಬಾರ್ಕಿ ಕಾರ್ಯಕ್ರಮ ನಿರ್ವಹಿಸಿದರು. ಕೆ.ಸಿ. ಹಂಜಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT