ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗಾದ ಹಾನಿಗೆ ಯಾರು ಹೊಣೆ?: ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಶ್ರೀನಿವಾಸ ಕಿಡಿ

Published 18 ಏಪ್ರಿಲ್ 2024, 14:49 IST
Last Updated 18 ಏಪ್ರಿಲ್ 2024, 14:49 IST
ಅಕ್ಷರ ಗಾತ್ರ

ಹಾನಗಲ್: ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದು, ಬಳಿಕವೂ ಸುಳ್ಳು ಹೇಳುತ್ತಿದೆ. ಬರಗಾಲದಂಥ ವಿಚಾರದಲ್ಲಿಯೂ ರಾಜಕಾರಣ ಮಾಡಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಕಿಡಿಕಾರಿದರು.

ತಾಲ್ಲೂಕಿನ ಕ್ಯಾಸನೂರು ಗ್ರಾಮದಲ್ಲಿ ನಡೆದ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರ ಪರಿಹಾರ ಬಿಡುಗಡೆಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮೂರು ತಿಂಗಳು ವಿಳಂಬ ಮಾಡಿದೆ ಎನ್ನುತ್ತಾರೆ. ಇನ್ನೊಂದೆಡೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರದಿಂದಲೇ ತಾಂತ್ರಿಕ ಕಾರಣಗಳಿಂದ ಬರ ಪರಿಹಾರ ಬಿಡುಗಡೆ ವಿಳಂಬವಾಗಿದೆ ಎನ್ನುತ್ತಾರೆ. ಕೇಂದ್ರದ ಸಚಿವರು ಭಿನ್ನ ಹೇಳಿಕೆಗಳ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ಇಬ್ಬರೂ ಕೇಂದ್ರ ಸಚಿವರ ಹೇಳಿಕೆಗಳಲ್ಲಿ ಯಾವುದು ಸತ್ಯ ಎನ್ನುವುದಕ್ಕೆ ಶಾಸಕ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು. ರೈತರಿಗೆ ಆಗಿರುವ ಹಾನಿಯನ್ನು ಯಾರು ತುಂಬಿಕೊಡಬೇಕು ಎಂದು ಪ್ರಶ್ನಿಸಿದರು.

ಸಾಹಿತಿ ವಿಜಯಕಾಂತ ಪಾಟೀಲ ಮಾತನಾಡಿ, ಕೇಂದ್ರದ ಅನ್ಯಾಯ ಧೋರಣೆ ವಿರುದ್ಧ ಯಾವೊಬ್ಬ ಸಂಸದರೂ ಧ್ವನಿ ಎತ್ತರ ಕಾರಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಚುನಾವಣೆಯಲ್ಲಿ ಸೋಲಿಸುವ ಮೂಲಕ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದರು.

ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ವೀರಭದ್ರಗೌಡ ಪಾಟೀಲ, ಮುಖಂಡರಾದ ಸಿದ್ದನಗೌಡ ಪಾಟೀಲ, ನಾಗರಾಜ ಗಾಜಿಪುರ, ಚಂದ್ರು ಸುಣ್ಣದಕೊಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT