ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷದೊಳಗೆ ಹಕ್ಕುಪತ್ರ: ಶಾಸಕ ಮಾನೆ ಭರವಸೆ

ಶಾಡಗುಪ್ಪಿ ಗ್ರಾಮದಲ್ಲಿ ಅಹವಾಲು ಆಲಿಕೆ
Published 5 ಜನವರಿ 2024, 5:54 IST
Last Updated 5 ಜನವರಿ 2024, 5:54 IST
ಅಕ್ಷರ ಗಾತ್ರ

ಅಕ್ಕಿಆಲೂರ: ತಾಲ್ಲೂಕಿನ ಸರ್ಕಾರಿ ಮತ್ತು ಖಾಸಗಿ ಸರ್ವೆ ನಂಬರ್ ಜಮೀನುಗಳಲ್ಲಿ ಮಾಲಿಕತ್ವ ಇಲ್ಲದೇ 30 ವರ್ಷಗಳಿಂದ ವಾಸಿಸುತ್ತಿರುವ 13 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ದೃಢಸಂಕಲ್ಪ ಮಾಡಿದ್ದು, ಈಗಾಗಲೇ ಹೊಸ ಕಂದಾಯ ಗ್ರಾಮ, ಉಪ ಗ್ರಾಮಗಳನ್ನು ಸೃಷ್ಟಿಸಲಾಗುತ್ತಿದೆ. ವರ್ಷದ ಒಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾನಗಲ್ ತಾಲ್ಲೂಕಿನ ಶಾಡಗುಪ್ಪಿ ಸೇರಿದಂತೆ ಹಲವೆಡೆ ಗುರುವಾರ ಗ್ರಾಮ ಸಂಚಾರ ಕೈಗೊಂಡು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಿ ಸರ್ವೆ ಕೈಗೊಳ್ಳಲಾಗಿದೆ. ರಸ್ತೆ ಇಲ್ಲದೇ, ಅಗತ್ಯ ಸೌಲಭ್ಯಗಳೂ ಇಲ್ಲದೇ ಸರ್ಕಾರಿ ಮತ್ತು ಖಾಸಗಿ ಸರ್ವೆ ನಂಬರ್ ಜಮೀನುಗಳಲ್ಲಿ ಸಾವಿರಾರು ಕುಟುಂಬಗಳು ವಾಸಿಸುತ್ತಿವೆ. ಹಕ್ಕುಪತ್ರ ಇಲ್ಲದೇ ಸರ್ಕಾರದ ಸೌಲಭ್ಯ, ಬ್ಯಾಂಕಿನ ಸಾಲ ಸೇರಿದಂತೆ ಇನ್ನಿತರ ಎಲ್ಲ ರೀತಿಯ ನೆರವಿನಿಂದ ವಂಚಿತವಾಗಿವೆ ಎಂದು ಹೇಳಿದರು.

ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿ ಇಂಥ ಕುಟುಂಬಗಳ ಸಂಪೂರ್ಣ ವಿವರ ಸಂಗ್ರಹಿಸಲಾಗಿದೆ. ಹಂತ ಹಂತವಾಗಿ ಪ್ರತಿ ಕುಟುಂಬಗಳಿಗೂ ಹಕ್ಕುಪತ್ರ ವಿತರಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಹತ್ತಾರು ವರ್ಷಗಳಿಂದ ಬಗೆಹರಿಯದ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು ಗಮನ ನೀಡಲಾಗಿದೆ. ಪ್ರತಿ ಗ್ರಾಮಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿದ್ದು ಸಮಸ್ಯೆ ಅರಿಯುವ ಪ್ರಯತ್ನ ನಡೆಸಲಾಗಿದೆ ಎಂದು ವಿವರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೊಟ್ರಪ್ಪ ಕುದರಿಸಿದ್ದನವರ, ಮುಖಂಡರಾದ ಪ್ರಕಾಶ ಓಲೇಕಾರ, ರಾಜಶೇಖರ ಮಲಗುಂದ, ಶ್ರೀಧರ ಮಲಗುಂದ, ಮೂಕಣ್ಣ ತಳವಾರ, ಶಿವರುದ್ರಪ್ಪ ಕಲ್ಲಣ್ಣನವರ, ಗುಡ್ಡಪ್ಪ ಹರಿಜನ, ಇಂದ್ರಪ್ಪ ಮಕರವಳ್ಳಿ, ರಮೇಶ ಸಾವಕ್ಕನವರ, ಮಂಜಪ್ಪ ಓಲೇಕಾರ, ನಾರಾಯಣಪ್ಪ ಜಾಲಗಾರ, ಶಿವಣ್ಣ ಬಾರ್ಕಿ, ಮೂಕಪ್ಪ ಬಾರ್ಕಿ, ಪರಸಪ್ಪ ಕಾಣೇರ ಸೇರಿದಂತೆ ಇನ್ನೂ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT