ಹಿರೇಕೆರೂರ: ‘ಶಿರಸಿಯ ಮನು ವಿಕಾಸ ಸಂಸ್ಥೆ ಯಾವುದೇ ಫಲಾಪೇಕ್ಷೆ ಇಲ್ಲದೇ ಸಾಮಾಜಿಕ ಕಳಕಳಿಯಿಂದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೆರೆಗಳ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ತಾಲ್ಲೂಕಿನ ದೀವಿಗಿಹಳ್ಳಿ ಗ್ರಾಮದಲ್ಲಿ ಶಿರಸಿಯ ಮನು ವಿಕಾಸ ಸಂಸ್ಥೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಕೆರೆ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದ ಅವರು, ‘ಕೆರೆಗಳು ಗ್ರಾಮೀಣ ಭಾಗಗಳ ಅಮೂಲ್ಯ ಜಲಮೂಲಗಳಾಗಿವೆ. ಗ್ರಾಮಸ್ಥರು ಅವುಗಳನ್ನು ಸಂರಕ್ಷಿಸಬೇಕು. ಕೆರೆಯ ಶುಚಿತ್ವ ಕಾಯ್ದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ’ ಎಂದು ತಿಳಿಸಿದರು.

ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಗಣಪತಿ ಭಟ್ ಮಾತನಾಡಿದರು. ಕೆಎಂಎಫ್ ಉಪಾಧ್ಯಕ್ಷ ಉಜ್ಜನಗೌಡ ಮಾವಿನತೋಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮಲ್ಲನಗೌಡ ನಾಗಪ್ಪನವರ, ಸುತ್ತಕೋಟಿ ಗ್ರಾಮ ಪಂಚಾಯಿತಿ ಅಧಿಕಾರಿ ಗಾಯಿತ್ರಿ, ಎಂ.ಡಿ. ಹೆಗಡೆ, ಬಸವರಾಜ ಗುಡದಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.