ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ಗೆ ಅ.28ರಂದು ಬುಧವಾರ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಸೋಮವಾರ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ.

ಸುಗಮ ಮತದಾನಕ್ಕಾಗಿ 37 ಮತಗಟ್ಟೆಗಳನ್ನು ಜಿಲ್ಲೆಯಾದ್ಯಂತ ಸ್ಥಾಪಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ಕೋವಿಡ್ ಪ್ರಮಾಣಿಕೃತ ಮಾರ್ಗಸೂಚಿಯಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಹಾಗೂ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಎಸ್ಓಪಿ ಮಾರ್ಗಸೂಚಿಯಂತೆ ಪ್ರತಿ ಮತಗಟ್ಟೆಗೂ ಸ್ಯಾನಿಟೈಸರ್, ಮಾಸ್ಕ್, ಪಲ್ಸ್ ಆಕ್ಸಿಮೀಟರ್, ಕೈಗವಸು, ಪಿಪಿಇ ಕಿಟ್ ಒದಗಿಸಲಾಗಿದೆ. ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿದಂತೆ 209 ಮಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ‘ಹೆಲ್ತ್ ಡೆಸ್ಕ್’ ಸ್ಥಾಪಿಸಲಾಗಿದ್ದು, ಆರೋಗ್ಯ ಸಿಬ್ಬಂದಿ, ವೈದ್ಯರನ್ನು ನಿಯೋಜಿಸಲಾಗಿದೆ.

ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕಾರ್ಯವು ಜಿಲ್ಲೆಯ ಎಲ್ಲ ತಹಶೀಲ್ದಾರ್ಗಳ ಕಚೇರಿಯಲ್ಲಿ ನಡೆಯಲಿದೆ. ಪ್ರತಿ ಮತದಾರರಿಗೆ ಮಾಸ್ಕ್ ಹಾಗು ಪ್ರತ್ಯೇಕ ನೇರಳೆ ಬಣ್ಣದ ಸ್ಕೆಚ್ ಪೆನ್ ಒದಗಿಸಲಾಗುವುದು. ಬ್ಯಾಲೆಟ್ ಪೇಪರ್ ನೀಡಲಾಗುವುದು, ಮತದಾರರು ನೇರಳೆ ಬಣ್ಣದ ಸ್ಕೆಚ್ ಪೆನ್ ಬಳಸಿ ಕಡ್ಡಾಯವಾಗಿ ಅಂಕಿಗಳನ್ನು ನಮೂದಿಸುವುದರ ಮೂಲಕ ಮತ ಚಲಾಯಿಸಬೇಕು. ಅಂಕಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಚಿಹ್ನೆ ಅಥವಾ ಅಕ್ಷರ ಬರವಣಿಗೆಯಲ್ಲಿ ಮತ ಚಲಾಯಿಸುವ ಹಾಗಿಲ್ಲ.

ಪ್ರತಿಬಂಧಕಾಜ್ಞೆ ಜಾರಿ

ಜಿಲ್ಲೆಯ ಮತದಾನ ಕೇಂದ್ರಗಳ ಸುತ್ತ ಅ.26ರ ಸಂಜೆ 6 ಗಂಟೆಯಿಂದ ಅ.28ರ ಮಧ್ಯರಾತ್ರಿ 12 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ 37 ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಪ್ರಚಾರದ ಸಲುವಾಗಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ. ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾಡ್ರ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಒಯುವುದನ್ನು ನಿಷೇಧಿಸಲಾಗಿದೆ.

ಬಹಿರಂಗ ಪ್ರಚಾರದ ಅವಧಿಯ ಮುಕ್ತಾದ ನಂತರ ಅ.26ರ ಸಂಜೆ 5 ಗಂಟೆಯ ನಂತರ ಹಾವೇರಿ ಜಿಲ್ಲೆಯ ಮತದಾರರಲ್ಲದವರು ಜಿಲ್ಲೆಯಿಂದ ಹೊರಗೆ ಹೊಗಬೇಕು. ಜಿಲ್ಲೆಯ ಎಲ್ಲ ಕಲ್ಯಾಣ ಮಂಟಪ, ಸಮುದಾಯ ಭವನ, ವಸತಿಗೃಹಗಳಲ್ಲಿ ಹಾಗೂ ಅತಿಥಿಗೃಹಗಳಲ್ಲಿ ಬಹಿರಂಗ ಪ್ರಚಾರದಲ್ಲಿ ತೊಡಗಿರುವ ಜಿಲ್ಲೆಯವರಲ್ಲದವರು ವಾಸ್ತವ್ಯ ಮಾಡುವಂತಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.