ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣೆಬೆನ್ನೂರು: ಬೆಂಕಿ ಅವಘಡದಿಂದ 90ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿ

Last Updated 20 ಸೆಪ್ಟೆಂಬರ್ 2021, 18:13 IST
ಅಕ್ಷರ ಗಾತ್ರ

ರಾಣೆಬೆನ್ನೂರು (ಹಾವೇರಿ): ನಗರದ ದುರ್ಗಾ ತರಕಾರಿ ಮಾರುಕಟ್ಟೆಯಲ್ಲಿ ಸೋಮವಾರ ಬೆಳಗಿನ ಜಾವ 4 ಗಂಟೆ ವೇಳೆಯಲ್ಲಿ ಬೆಂಕಿ ಬಿದ್ದು 90ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿಯಾಗಿದೆ.

ನಗರಸಭೆ ವ್ಯಾಪ್ತಿಯಲ್ಲಿ ಬರುವ ಈ ಮಾರುಕಟ್ಟೆಯಲ್ಲಿದ್ದ ತಗಡಿನ ಮಳಿಗೆಗಳಿಗೆ ಬೆಂಕಿ ತಗುಲಿ ತರಕಾರಿ, ಹಣ್ಣು, ದಿನಸಿ ಪದಾರ್ಥಗಳು ಸುಟ್ಟು ಭಸ್ಮವಾಗಿವೆ.

ಬೆಂಕಿ ಉರಿಯುತ್ತಿರುವುದನ್ನು ನೋಡಿದ ಸ್ಥಳೀಯರು ನೀಡಿದಮಾಹಿತಿ ಮೇರೆಗೆ,ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆ ವೇಳೆಗಾಗಲೇ ಬಹಳಷ್ಟು ಮಳಿಗೆಗಳಲ್ಲಿದ್ದ ಪದಾರ್ಥಗಳು ಸುಟ್ಟು ಕರಕಲಾಗಿದ್ದವು. ತಮ್ಮ ಅಂಗಡಿಗಳ ಮುಂದೆ ವ್ಯಾಪಾರಿಗಳ ರೋದನ ಮುಗಿಲು ಮುಟ್ಟಿತ್ತು.

ದುಷ್ಕರ್ಮಿಗಳು ದುರುದ್ದೇಶದಿಂದ ಪೆಟ್ರೋಲ್‌ ಸುರಿದು ಮಳಿಗೆಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT