ಬ್ಯಾಡಗಿ: ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಹೀಗಾಗಿ ರಕ್ತವನ್ನು ಮನುಷ್ಯರಿಂದ ಸಂಗ್ರಹಿಸಬೇಕಾಗಿದ್ದು, ಆರೋಗ್ಯವಂತ ಯುವಕರು ರಕ್ತದಾನ ಮಾಡಲು ಮುಂದಾಗುವಂತೆ ಬಿಆರ್ಇ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಾವೇರಿ ವಿಶ್ವವಿದ್ಯಾಲಯದ ಎನ್ಎಸ್ಎಸ್ ಕೋಶ, ಔಷಧೀಯ ಮಹಾವಿದ್ಯಾಲಯ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾ ರಕ್ತ ನಿಧಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಇದರಿಂದ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದು. ಜೊತೆಗೆ ರೋಗ ನಿರೋಧಕ ಶಕ್ತಿ ಕೂಡಾ ಹೆಚ್ಚಲಿದೆ ಎಂದರು.

ಹೆಚ್ಚಿನ ಮಹಿಳಾ ಪ್ರಶಿಕ್ಷಣಾರ್ಥಿಗಳು ರಕ್ತದಾನ ಮಾಡಿರುವುದು ಜಿಲ್ಲೆಯಲ್ಲಿ ಅತಿ ಹೆಚ್ಚು ಎನ್ನಲಾಗಿದೆ. ಒಟ್ಟಾರೆ 32 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಪ್ರಾಚಾರ್ಯ ಎಂ.ಸುರೇಶ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಷಣ್ಮುಖಪ್ಪ ಬಳ್ಳಾರಿ, ಖಜಾಂಚಿ ಚನ್ನವೀರಪ್ಪ ಬಳ್ಳಾರಿ, ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಬಸವರಾಜ ಕಮತದ, ಡಾ. ರೇಣುಕಾರಾಧ್ಯ ಚಿಟ್ಟಿ, ತಾಂತ್ರಿಕ ಅಧಿಕಾರಿ ಶಶಿಕುಮಾರ ಶಿಮೊಗ್ಗಿ, ಸಿದ್ದು ಹಿರಗಣ್ಣನವರ, ಈರಣ್ಣ ಆರ್.ಸಿ ಹಾಗೂ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.