ಹಾವೇರಿ: ಬೆಂಗಳೂರಿನ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಕೊಲೆ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಅವರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅತಿ ಶೀಘ್ರದಲ್ಲಿ ಕೊಲೆ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ’ ಎಂದು ತಿಳಿಸಿದರು.

ಮಕ್ಕಳ ಆರೋಗ್ಯ ಶಿಬಿರ:

ಕೋವಿಡ್ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಣೆ ಮಾಡಲು ರಾಜ್ಯದಲ್ಲೇ ಪ್ರಥಮ ಬಾರಿಗೆ ಹಾವೇರಿ ಜಿಲ್ಲೆಯಲ್ಲಿ ಜೂನ್ 25ರಿಂದ ಜುಲೈ 30ರವರೆಗೆ ‘ಮಕ್ಕಳ ವಿಶೇಷ ಆರೋಗ್ಯ ಶಿಬಿರ’ ಆಯೋಜಿಸಲಾಗಿದೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜಿಲ್ಲೆಯ 2.75 ಲಕ್ಷ ಮಕ್ಕಳ ತಪಾಸಣೆ ನಡೆಸಿ, ಅಪೌಷ್ಟಿಕತೆ ನಿವಾರಣೆಗೆ ‘ಪೌಷ್ಟಿಕ ಕಿಟ್’ ನೀಡಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.