ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಲಾಪುರ: ಕಂಟೈನ್ಮೆಂಟ್‌ ವಲಯ ತೆರವು

Last Updated 7 ಜೂನ್ 2021, 16:07 IST
ಅಕ್ಷರ ಗಾತ್ರ

ಬ್ಯಾಡಗಿ: ತಾಲ್ಲೂಕಿನ ನಾಗಲಾಪುರ ಗ್ರಾಮದ 94 ಜನ ಸೋಮವಾರ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ 4ರಂದು ಜಿಲ್ಲಾಧಿಕಾರಿ ಘೋಷಿಸಿದ್ದ ಕಂಟೈನ್ಮೆಂಟ್‌ ವಲಯವನ್ನು ತೆರವುಗೊಳಿಸಲಾಗಿದೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರೇಡ್‌–2 ತಹಶೀಲ್ದಾರ್‌ ಗವಿಸಿದ್ದಪ್ಪ ದ್ಯಾಮಣ್ಣವರ, ಕಳೆದ ವಾರ ಗ್ರಾಮದಲ್ಲಿ ಕೋವಿಡ್‌ ಸೋಂಕಿತರು ಪತ್ತೆಯಾಗಿದ್ದರು. ಹೀಗಾಗಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆಗಾಗಿ ಕೋವಿಡ್‌ ಪರೀಕ್ಷೆ ನಡೆಸಲು ನಮ್ಮ ತಂಡ ಗ್ರಾಮಕ್ಕೆ ತೆರಳಿತ್ತು. ಗ್ರಾಮಸ್ಥರ ಮನೆ ಬಾಗಿಲಿಗೆ ತೆರಳಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಲು ಮಾಡಿದ ಮನವಿಗೆ ಸ್ಪಂದಿಸಲಿಲ್ಲ. ಹೀಗಾಗಿ ಜೂನ್ 4ರಂದು ಕಂಟೈನ್ಮೆಂಟ್‌ ವಲಯವೆಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶದಂತೆ ಗ್ರಾಮವನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್‌ ಮಾಡಲಾಗಿತ್ತು’ ಎಂದರು.

‘ಜನರು ಗ್ರಾಮದಿಂದ ಹೊರಗೆ ಹೋಗದಂತೆ ಹಾಗೂ ಗ್ರಾಮಕ್ಕೆ ಯಾರೂ ಬಾರದಂತೆ ನಿರ್ಬಂಧ ವಿಧಿಸಿ ಅಗತ್ಯ ವಸ್ತುಗಳ ಪೂರೈಕೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಗ್ರಾಮಸ್ಥರು ಸ್ವಯಂ ಪ್ರೇರಣೆಯಿಂದ ಸೋಮವಾರ ಪರೀಕ್ಷೆ ಮಾಡಿಸಿಕೊಂಡ ಹಿನ್ನೆಲೆಯಲ್ಲಿ ಸಂಜೆ ಸೀಲ್‌ಡೌನ್‌ ತೆರವುಗೊಳಿಸಲಾಯಿತು’ ಎಂದರು.

‘ಆರ್‌ಟಿಪಿಸಿಆರ್‌ ವರದಿ ಬರುವರೆಗೂ ಪ್ರತ್ಯೇಕವಾಗಿರುವಂತೆ ಸೂಚಿಸಿ, ಪ್ರತಿಯಬ್ಬರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಕೊಳ್ಳಬೇಕು. ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT