ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದೀಶ ಶೆಟ್ಟರ್‌ ವಿಶ್ವದಾಖಲೆ: ಸನ್ಮಾನ

Published 16 ಜುಲೈ 2023, 14:10 IST
Last Updated 16 ಜುಲೈ 2023, 14:10 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಇಲ್ಲಿನ ಬನಶಂಕರಿನಗರದ ನಂದೀಶ್ವರ ನೈಪುಣ್ಯ ಕೌಶಲ್ಯ ಸಂಸ್ಥೆ ರಾಣೆಬೆನ್ನೂರು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಮತ್ತು ಶಿಕ್ಷಣ ಇಲಾಖೆಯ ಆಶ್ರಯದಲ್ಲಿ 2016 ನೇ ಶೈಕ್ಷಣಿಕ ಸಾಲಿನಿಂದ ರಾಜ್ಯಾದ್ಯಂತ 33 ಶೈಕ್ಷಣಿಕ ಜಿಲ್ಲೆ, 176 ತಾಲ್ಲೂಕು, 2655 ಪ್ರೌಢಶಾಲೆಗಳು, 2,67,000 ಕ್ಕೂ ಅಧಿಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ನಿವಾರಣೆಯ ಕುರಿತು ಜೀವನ ಅಧ್ಯಯನ ಮತ್ತು ಮೆದುಳಿನ ನಿರ್ವಹಣೆಯ ಬಗ್ಗೆ ಮನೋಬಲ ಹೆಚ್ಚಿಸುವ ವಿಶೇಷ ನೈಪುಣ್ಯ ಕೌಶಲ್ಯ ತರಬೇತಿಯನ್ನು ನೀಡಿರುವುದು ಏಷ್ಯನ್ ಖಂಡದಲ್ಲಿ ವಿಶ್ವ ದಾಖಲೆಯಾಗಿದೆ.

ಈ ಸಂಬಂಧ ಸಂಸ್ಥೆಯ ಅಧ್ಯಕ್ಷ ನಂದೀಶ ಬಿ. ಶೆಟ್ಟರ್ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಂಗಳೂರಿನ ವಿಧಾನ ಸೌಧದಲ್ಲಿ ‘ಬ್ರಾವೊ ಇಂಟರ್ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕೃತ ಪ್ರಮಾಣ ಪತ್ರ ಮತ್ತು ಪದಕವನ್ನು ಈಚೆಗೆ ನೀಡಿ ಗೌರವಿಸಿದರು. ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT