ಗುರುವಾರ , ಆಗಸ್ಟ್ 11, 2022
24 °C

ಮೋದಿ ಜನ್ಮದಿನ: ರಕ್ತದಾನ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ವರ್ಷದ ಜನ್ಮದಿನದ ಅಂಗವಾಗಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. 

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪವನಕುಮಾರ ಮಲ್ಲಾಡದ ಮಾತನಾಡಿ, ‘ರಕ್ತದಾನ ಶ್ರೇಷ್ಠ ದಾನವಾಗಿದ್ದು, ಮತ್ತೊಬ್ಬರಿಗೆ ಜೀವದಾನ ಮಾಡಲು ಯುವಕರು ಮುಂದಾಗಬೇಕು ಎಂದು ಹೇಳಿದರು. 

ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ, ‘ಮೋದಿ ಅವರ ಜನ್ಮದಿನವನ್ನು ರಕ್ತದಾನ ಮಾಡುವ ಮೂಲಕ ಅರ್ಥಗರ್ಭಿತವಾಗಿ ಆಚರಿಸಬೇಕೆಂದು ಯುವ ಮೋರ್ಚಾದ ವತಿಯಿಂದ ರಾಜ್ಯದಾದ್ಯಂತ 70 ಕಡೆಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ’ ಎಂದು ಹೇಳಿದರು.

ಶಾಸಕ ನೆಹರು ಚ. ಓಲೇಕಾರ ಮಾತನಾಡಿ, ‘ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ವಿಶ್ವಗುರು ಆಗಿಸುವ ಕನಸು ಕೆಲವೇ ದಿನಗಳಲ್ಲಿ ಈಡೇರಲಿದೆ. ಯುವ ಮೋರ್ಚಾದವರು ಬಿಜೆಪಿಯ ಬೆನ್ನೆಲುಬು. ಯುವಕರು ರಕ್ತದಾನ ಶಿಬಿರ ಏರ್ಪಡಿಸಿರುವುದು ಶ್ಲಾಘನೀಯ’ ಎಂದು ಹೇಳಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿದರು. ನಗರಸಭೆ ಸದಸ್ಯರಾದ ಚನ್ನಮ್ಮ ಬ್ಯಾಡಗಿ, ಜಗದೀಶ ಮಲಗೋಡ, ಮುಖಂಡರಾದ ಗಿರೀಶ ತುಪ್ಪದ, ಬಸವರಾಜ ಕಳಸೂರ, ಪ್ರದೀಪ ಮುಳ್ಳೂರ, ಶಶಿಧರ ಹೊಸಳ್ಳಿ, ಪ್ರಕಾಶ ಶೃಂಗೇರಿ, ಅಭಿಷೇಕ ಗುಡಗೂರ, ವೀರೇಶ ಹಿರೇಮಠ, ಮಂಜುನಾಥ ಮಡಿವಾಳರ, ದಯಾನಂದ ಜಾಧವ್, ವಿವೇಕಾನಂದ ಇಂಗಳಗಿ, ಪ್ರಶಾಂತ ಕೋಡಿತ್ಕರ್, ಕಿರಣ ಅಂಗಡಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು