ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ ಲೋಕ್ ಅದಾಲತ್ ಸೆ.14ರಂದು

Published : 29 ಆಗಸ್ಟ್ 2024, 14:54 IST
Last Updated : 29 ಆಗಸ್ಟ್ 2024, 14:54 IST
ಫಾಲೋ ಮಾಡಿ
Comments

ಹಿರೇಕೆರೂರು: ಸೆ.14ರಂದು ಹಿರೇಕೆರೂರಿನ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಅದಾಲತ್‌ನಲ್ಲಿ ರಾಜಿ ಮಾಡಿಕೊಳ್ಳಲು ಬಯಸುವ ಕಕ್ಷಿದಾರರು ಲೋಕ್ ಅದಾಲತ್‌ನಲ್ಲಿ ಭಾಗಿಯಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ, ದಿವಾಣಿ ನ್ಯಾಯಾಧೀಶೆ ನಾಗರತ್ನಮ್ಮ ತಿಳಿಸಿದ್ದಾರೆ.

ಎನ್.ಐ ಕಾಯ್ದೆ ಪ್ರಕರಣಗಳು, ವಿಭಾಗಿ ದಾವೆ, ಜೀವನಾಂಶ ಪ್ರಕರಣ, ಅಪಘಾತ ಪರಿಹಾರ ಪ್ರಕರಣಗಳು, ರಾಜಿಯಾಗುವಂತಹ ಅಪರಾಧಿಕ ಪ್ರಕರಣಗಳು, ಜನನ ಪ್ರಮಾಣ ಪ್ರಕರಣಗಳು, ವಿದ್ಯುತ್, ನೀರಿನ ಬಿಲ್ಲುಗಳು, ಕಂದಾಯಕ್ಕೆ ಸಂಬಂಧಿಸಿದ ವ್ಯಾಜ್ಯ ಪೂರ್ವ ಪ್ರಕರಣಗಳು, ಹಣ ವಸೂಲಿ ಪ್ರಕರಣಗಳು, ಕಾರ್ಮಿಕ ವಿವಾದ ಪ್ರಕರಣಗಳು ಇತ್ಯರ್ಥಪಡಿಸಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT