ಬುಧವಾರ, ಆಗಸ್ಟ್ 4, 2021
20 °C

’ಸಂಪುಟದಿಂದ ಅಸಮರ್ಥರನ್ನು ಕೈಬಿಡಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಂಪುಟದಿಂದ ಅಸಮರ್ಥರನ್ನು ಕೈಬಿಟ್ಟು, ಸಮರ್ಥರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ನೆಹರು ಓಲೇಕಾರ ಒತ್ತಾಯಿಸಿದರು. 

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ವಿರುದ್ಧ ಯಾರೂ ಷಡ್ಯಂತ್ರ ನಡೆಸಿಲ್ಲ. ಆದರೆ ಅಧಿಕಾರ ಬೇಕು ಎನ್ನುವ ನಿಟ್ಟಿನಲ್ಲಿ ಬಿನ್ನಾಭಿಪ್ರಾಯಗಳು ಸಹಜ. ಸಚಿವ ಸ್ಥಾನ ಪಡೆಯಲು ನಾನಾ ರೀತಿಯ ತಂತ್ರಗಳನ್ನು ಮಾಡುತ್ತಿದ್ದಾರೆ. ಸಚಿವ ಸ್ಥಾನ ಸಿಗದೇ ಇದ್ದರೆ ಕೆಲವರು ಸರ್ಕಾರವನ್ನು ಕೆಡವುತ್ತೇವೆ ಎಂದು ಆಂತರಿಕವಾಗಿ ಹೇಳುತ್ತಿದ್ದಾರೆ. ಆದರೆ ಭಿನ್ನಾಭಿಪ್ರಾಯ ಶಮನವಾಗಲಿದೆ. ಉಮೇಶ ಕತ್ತಿ ಸಚಿವರಾಗಲಿದ್ದಾರೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು. 

‘ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು. ನಾನು ಬಲಗೈ ಸಮುದಾಯದ ಪ್ರಮುಖನಾಗಿದ್ದೇನೆ. ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇನೆ. ಮುಂದಿನ ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು