ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಹರು ಓಲೇಕಾರ ಕಾಂಗ್ರೆಸ್‌ಗೆ ಸೇರ್ಪಡೆ

Published 1 ಮೇ 2024, 23:59 IST
Last Updated 1 ಮೇ 2024, 23:59 IST
ಅಕ್ಷರ ಗಾತ್ರ

ಹಾವೇರಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ,ವರ್ಷದಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ ಬುಧವಾರ ಕಾಂಗ್ರೆಸ್ ಸೇರ್ಪಡೆಯಾದರು.

ಯಾದಗಿರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಓಲೇಕಾರ ಕಾಂಗ್ರೆಸ್ ಸೇರಿದ್ದಾರೆ.

ಮತದಾನಕ್ಕೆ ಇನ್ನು 5 ದಿನ ಬಾಕಿ ಇರುವಾಗ ಓಲೇಕಾರ ಕಾಂಗ್ರೆಸ್‌ ಸೇರ್ಪಡೆ ಆಗಿದ್ದರಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಎಂಬ ಬಗ್ಗೆ ಕ್ಷೇತ್ರದಲ್ಲಿ ಚರ್ಚೆ ಶುರುವಾಗಿದೆ. ಕೆಲ ದಿನಗಳ ಹಿಂದೆ ಬಿಜೆಪಿಯ ಚುನಾವಣಾ ಪ್ರಚಾರ ಸಭೆಗೆ ಬರಲಿದ್ದಾರೆ ಎಂಬ ವದಂತಿ ಹರಡಿತ್ತು. ಆಗ ಬಿಜೆಪಿಯ ಇಬ್ಬರು ಮಾಜಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT