ಬುಧವಾರ, ಫೆಬ್ರವರಿ 19, 2020
27 °C

‘ಅಸಮರ್ಥ ಸಚಿವರನ್ನು ಕೈಬಿಡಬೇಕು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಕೆಲಸ ಮಾಡದ ಅಸಮರ್ಥ ಸಚಿವರನ್ನು ಕೈಬಿಡಬೇಕು. ಆಗ ಕ್ಯಾಬಿನೆಟ್‌ಗೆ ಗೌರವ ಬರುತ್ತದೆ’ ಎಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ನೆಹರು ಓಲೇಕಾರ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಸಚಿವರು ಸಮಪರ್ಕವಾಗಿ ಕೆಲಸ ಮಾಡದೆ, ಶಾಸಕರನ್ನೂ ಕಡೆಗಣಿಸಿದ ಕಾರಣ ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಪತನಗೊಂಡಿತು. ಆ ಪರಿಸ್ಥಿತಿ ಬಿಜೆಪಿ ಸರ್ಕಾರಕ್ಕೆ ಬರಬಾರದು ಎಂದರೆ ಸಚಿವರಾದವರು ಸರಿಯಾಗಿ ಕಾರ್ಯನಿರ್ವಹಣೆ ಮಾಡಬೇಕು’ ಎಂದು ಹೇಳಿದರು.

‘ಸರ್ಕಾರ ಚೆನ್ನಾಗಿ ನಡೆಯಬೇಕು ಎಂಬುದು ನಮ್ಮ ಮೂಲ ಗುರಿ. ಅಧಿಕಾರ ಹಿಡಿಯಬೇಕು ಎಂಬುದಲ್ಲ. ಸಚಿವರು ಕೆಲಸ ಮಾಡದೇ ಇದ್ದರೆ, ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಸಚಿವರೆಲ್ಲರೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಮಸ್ಯೆಗಳಿಗೆ ಸ್ಪಂದಿಸಬೇಕು. ಮುಂದಿನ ದಿನಗಳಲ್ಲಿ ನನಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ’ ಎಂದರು. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)