ಶನಿವಾರ, ಜನವರಿ 23, 2021
28 °C

‘ಸಮಾಜದ ಮುಖ್ಯವಾಹಿನಿಗೆ ಅಲೆಮಾರಿಗಳು ಬರಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಅಲೆಮಾರಿ/ ಅರೆಅಲೆಮಾರಿ ಜನಾಂಗದ ರಕ್ಷಣೆಗೆ ಹಾಗೂ ಸಾಮಾಜಿಕ ಸೌಲಭ್ಯ ಕಲ್ಪಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಅಲೆಮಾರಿ/ ಅರೆಅಲೆಮಾರಿ ಜನಾಂಗದವರು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎ. ಜಮಖಾನೆ ಹೇಳಿದರು.

ಹಾವೇರಿ ತಾಲ್ಲೂಕಿನ ಹಳೇಕಿತ್ತೂರು ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಹಾವೇರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಅಲೆಮಾರಿ/ ಅರೆಅಲೆಮಾರಿ ಜನಾಂಗದವರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳು ಶೋಷಣೆಯಿಂದ ಮುಕ್ತರಾಗಬೇಕು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಬಳಸಿಕೊಳ್ಳಬೇಕು ಎಂದ ಅವರು ಅಲೆಮಾರಿ/ ಅರೆಅಲೆಮಾರಿ ಜನಾಂಗದವರಿಗೆ ಮನೆ ನಿರ್ಮಾಣದ ಮಾಡಿಕೊಡುವ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ವನಿತಾ ಸುಂಕದ ಹಾಗೂ ಸಂಪನ್ಮೂಲ ವ್ಯಕ್ತಿ ಎಸ್.ಎಚ್.ಮಜೀದ್‌ ಮಾತನಾಡಿದರು. 

ಪಿಡಿಒ ಶಾರದಾ ಜಾಲವಾಡಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ಲಕ್ಕವ್ವ ಮರಿಹೊನ್ನಪ್ಪನವರ, ಆರ್.ಸಿ ಹೊಸಮನಿ, ಗಿರೀಶ ರೋಣಿಮಠ, ಎಂ.ಎನ್ ಸಿದ್ದಪ್ಪನವರ, ಸುಜೇಂದ್ರ ಶ್ಯಾಡಗುಪ್ಪಿ, ಬಿ.ಜಿ. ನೆಲೋಗಲ್, ಜಿ.ಎಫ್. ದೊಡ್ಡಮನಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು. ಮಂಜುನಾಥ ಪಾಟೀಲ ಸ್ವಾಗತಿಸಿದರು, ಭೀಮರಾವ ಸಾಳುಂಕಿ ನಿರೂಪಿಸಿದರು. ಎಸ್.ಡಿ.ದೊಡ್ಡಮನಿ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.