ಭಾನುವಾರ, ಅಕ್ಟೋಬರ್ 2, 2022
20 °C

ನೂಲಿ ಚಂದಯ್ಯ ಶ್ರೇಷ್ಠ ಕಾಯಕ ಜೀವಿ: ಸಂಜೀವ ಕುಮಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ನುಡಿದಂತೆ ನಡೆದ ನೂಲಿ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ. ಇವರ ಜೀವನಾದರ್ಶಗಳನ್ನು ನಮ್ಮ ಬದುಕಲ್ಲಿ ಪಾಲಿಸಬೇಕು’ ಎಂದು ನಗರಸಭೆ ಅಧ್ಯಕ್ಷ ಸಂಜೀವ ಕುಮಾರ ನೀರಲಗಿ ಹೇಳಿದರು.

ಹಾವೇರಿ ನಗರದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ನೌಕರರ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕೊರಮರ ಸಂಘದ ಸಹಯೋಗದಲ್ಲಿ ಕಾಯಕಯೋಗಿ ಶಿವಶರಣ ನೂಲಿ ಚಂದಯ್ಯನವರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನೂಲಿ ಚಂದಯ್ಯ ಅವರ 48 ವಚನಗಳು ಸಿಕ್ಕಿವೆ. ಇವರ ವಚನಗಳಲ್ಲಿ ಸಮ ಸಮಾಜ ನಿರ್ಮಾಣದ ತಾತ್ವಿಕ ಚಿಂತನೆಗಳು ಅಡಗಿವೆ. ಕಾಯಕದಿಂದಲೇ ದೇವರನ್ನು ಕಂಡ ಈ ಮಹಾನ್ ಶರಣರ ಬದುಕು ನಮಗೆ ಆದರ್ಶವಾಗಬೇಕು ಎಂದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಏಳಿಗೆಗಾಗಿ ಶ್ರಮಿಸಿದ ವಿವಿಧ ಮುಖಂಡರನ್ನು ಸನ್ಮಾನಿಸಲಾಯಿತು.

ಉಪನ್ಯಾಸಕ ಈಶ್ವರಪ್ಪ ಡಿ.ಕೊರಗರ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಕೊರವರ ಸಂಘದ ಕೃಷ್ಣಪ್ಪ ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಭಜಂತ್ರಿ ಶಹನಾಯಿ ವಾದನ, ರೇಖಾ ಕುಲಕರ್ಣಿ ವಚನ ಗಾಯನ ಮಾಡಿದರು. ಆರ್.ವಿ.ಚಿನ್ನಿಕಟ್ಟಿ ಸ್ವಾಗತಿಸಿದರು. ಜಿಲ್ಲಾ ಕೊರವರ ಸಂಘದ ಅಧ್ಯಕ್ಷ ವೆಂಕಟೇಶ ಡಿ.ಬಿಜಾಪುರ, ಬಿ.ಟಿ ಕೊರವರ, ಬಿ.ಜಿ ಕೊರವರ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು