ಸೋಮವಾರ, ಮಾರ್ಚ್ 20, 2023
30 °C

ಪೌಷ್ಟಿಕ ಆಹಾರ ಬಗ್ಗೆ ಅರಿವು ಮೂಡಿಸಿ: ಶಾಸಕ ನೆಹರು ಓಲೇಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಆಟ– ಪಾಠಗಳ ಜತೆ, ಕೈತೋಟ ನಿರ್ಮಿಸಿ ಪೌಷ್ಟಿಕಾಂಶ ಆಹಾರದ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

‘ಪೋಷಣ ಅಭಿಯಾನ’ ಯೋಜನೆಯಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಂಗವಾಗಿ ಅಂಗನವಾಡಿ ಕೇಂದ್ರಗಳಲ್ಲಿ ‘ಪೌಷ್ಟಿಕ ಕೈತೋಟ’ ನಿರ್ಮಾಣಕ್ಕೆ ಬೀಜಗಳ ಬಿತ್ತನೆ ಕಾರ್ಯಕ್ರಮಕ್ಕೆ ಇಜಾರಿಲಕಮಾಪುರ ಅಂಗನವಾಡಿ ಕೇಂದ್ರ-185ರಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ಸುತ್ತಲಿನ ಪರಿಸರದಲ್ಲಿ ಗಿಡಮರಗಳನ್ನು ಬೆಳೆಸುವುದರಿಂದ ಆಮ್ಲಜನಕ ಪ್ರಮಾಣ ಹೆಚ್ಚುತ್ತದೆ ಹಾಗೂ ವಾತಾವರಣವು ಉತ್ತಮವಾಗಿರುತ್ತದೆ. ಸ್ವಚ್ಛ ಹಾಗೂ ಸುಂದರ ಪರಿಸರ ಎಲ್ಲ ಋತುಮಾನಗಳಿಗೂ ಆರೋಗ್ಯಯುತ ಜೀವನಕ್ಕೆ ಉಪಯುಕ್ತವಾಗುತ್ತದೆ ಎಂದು ಹೇಳಿದರು.

ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೈಲಾ ಜಿ. ಕುರಹಟ್ಟಿ ಮಾತನಾಡಿ, ತಾಲ್ಲೂಕಿನ 283 ಅಂಗನವಾಡಿ ಕೇಂದ್ರಗಳಿಗೆ ಪೋಷಣ ಅಭಿಯಾನ ಯೋಜನೆಯಡಿ ಕೆಂದ್ರ ಸರ್ಕಾರದ ವತಿಯಿಂದ ನ್ಯಾಷನಲ್ ಸೀಡ್ಸ್ ಫೆಡರೇಷನ್‌ ವತಿಯಿಂದ ಬೀಜಗಳನ್ನು ಪೋಸ್ಟ್‌ಗಳ ಮೂಲಕ ಪೂರೈಸಿದ್ದು, ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಬೀಜ ಬಿತ್ತನೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ನಗರಾಭಿವೃದ್ಧಿ ಪ್ರ್ರಾಧಿಕಾರ ಅಧ್ಯಕ್ಷ ಶಿವಕುಮಾರ ಸಂಗೂರ, ನಗರಸಭೆ ಸದಸ್ಯರು, ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರು, ಮಹಿಳಾ ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು