ಬುಧವಾರ, ಆಗಸ್ಟ್ 4, 2021
22 °C

ಹಾವೇರಿ: ಆನ್‌ಲೈನ್‌ ಭಿತ್ತಿಪತ್ರ ಚಳವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಬಾಕಿ ಉಳಿದಿರುವ ವೇತನವನ್ನು ಒಂದೇ ಬಾರಿಗೆ ಪಾವತಿಸಬೇಕು ಮತ್ತು ಕೊರೊನಾ ಹಿನ್ನೆಲೆಯಲ್ಲಿ ‘ಪರಿಹಾರ ಪ್ಯಾಕೇಜ್’ ಘೋಷಿಸಬೇಕು ಎಂದು ನಗರದಲ್ಲಿ ಶುಕ್ರವಾರ ಜಿಲ್ಲೆಯಾದ್ಯಂತ ರಾಜ್ಯ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರ ಹೋರಾಟ ಸಮಿತಿ ವತಿಯಿಂದ ‘ಆನ್‌ಲೈನ್‌ ಭಿತ್ತಿಪತ್ರ ಚಳವಳಿ’ ನಡೆಯಿತು. 

ಸೇವಾ ಭದ್ರತೆ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಭಿತ್ತಿಪತ್ರಗಳೊಂದಿಗೆ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸುವ ಮೂಲಕ ಚಳವಳಿಯಲ್ಲಿ ಪಾಲ್ಗೊಂಡರು.

‘ನಮ್ಮ ರಾಜ್ಯದಲ್ಲಿ ಈಗಾಗಲೇ 8 ಅತಿಥಿ ಉಪನ್ಯಾಸಕರು ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ಎಷ್ಟೋ ಜನ ಶಿಕ್ಷಕರು ಮತ್ತು ಉಪನ್ಯಾಸಕರು ಹೇಳಿಕೊಳ್ಳಲಾಗದ ನೋವನ್ನು ಒಳಗೊಳಗೇ ಅನುಭವಿಸುತ್ತಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದ ಕುಗ್ಗಿ ಹೋಗಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಆನ್ಲೈನ್ ಚಳವಳಿಯಲ್ಲಿ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರ್ಕಾರಿ ಕಾಲೇಜುಗಳ, ಶಾಲೆಗಳ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು