ಬುಧವಾರ, ಏಪ್ರಿಲ್ 21, 2021
32 °C
₹2620ರ ಬೆಂಬಲ ಬೆಲೆ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ

ಬಿಳಿ ಜೋಳ ಖರೀದಿ ಕೇಂದ್ರ ಆರಂಭಿಸಿ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಹೈಬ್ರಿಡ್ ಬಿಳಿಜೋಳ ಖರೀದಿ ಕೇಂದ್ರಗಳನ್ನು ಹಾವೇರಿ, ರಾಣೆಬೆನ್ನೂರು ಹಾಗೂ ಶಿಗ್ಗಾವಿ ಎ.ಪಿ.ಎಂ.ಸಿ ಯಾರ್ಡ್‍ನಲ್ಲಿ ತೆರೆಯಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ಜರುಗಿದ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ,  ಪ್ರಸ್ತುತ ಜಿಲ್ಲೆಯಲ್ಲಿ ಹೈಬ್ರಿಡ್ ಬಿಳಿಜೋಳ ಆವಕ ಕಡಿಮೆ ಪ್ರಮಾಣದಲ್ಲಿದೆ ಹಾಗೂ ಕನಿಷ್ಠ ಬೆಲೆ ₹1009 ಆಗಿದೆ. ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಗಿಂತ ಕಡಿಮೆ ಇರುವುದರಿಂದ ₹2620 ಗಳಿಗೆ ಬೆಂಬಲ ಬೆಲೆಯಡಿ ಖರೀದಿಸಲು ಕೇಂದ್ರ ಆರಂಭಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಮಾಲ್ದಂಡಿ ಜೋಳವನ್ನು ಬೆಳೆಯಲಾಗುತ್ತಿದ್ದು, ಬಿತ್ತನೆ ಕ್ಷೇತ್ರ ಮತ್ತು ನಿರೀಕ್ಷಿತ ಉತ್ಪಾದನೆ ಕಡಿಮೆ ಇದೆ. ಮಾಲ್ದಂಡಿ ಬಿಳಿಜೋಳದ ಬೆಲೆಯು ಪ್ರತಿ ಕ್ವಿಂಟಲ್‍ಗೆ ₹3 ಸಾವಿರಕ್ಕಿಂತ ಅಧಿಕವಾಗಿದ್ದು, ಸರ್ಕಾರ ಘೋಷಿಸಿದ ಬೆಂಬಲ ಬೆಲೆಗಿಂತ ಹೆಚ್ಚಾಗಿದೆ. ಹಾಗಾಗಿ ರೈತರು ತಾವು ಬೆಳೆದ ಮಾಲ್ದಂಡಿ ಬಿಳಿಜೋಳವನ್ನು ಖರೀದಿ ಕೇಂದ್ರಗಳಿಗೆ ಮಾರಾಟ ಮಾಡುತ್ತಿಲ್ಲ. ಒಂದು ವೇಳೆ ಮುಕ್ತ ಮಾರುಕಟ್ಟೆ ಬೆಲೆ ಸರ್ಕಾರದ ಘೋಷಿಸಿದ ಬೆಂಬಲ ಬೆಲೆಗಿಂತ ಕಡಿಮೆಯಾದಲ್ಲಿ ಈಗಾಗಲೇ ಹೈಬ್ರಿಡ್ ಜೋಳ ಖರೀದಿಗೆ ತೆರೆಯಲಾದ ಖರೀದಿ ಕೇಂದ್ರಗಳಲ್ಲಿ ಮಾಲ್ದಂಡಿ ಬಿಳಿಜೋಳವನ್ನು ಖರೀದಿಸಲಾಗುವುದು ಎಂದು ಹೇಳಿದರು.

ಖರೀದಿ ಕೇಂದ್ರಗಳಲ್ಲಿ ಎಲ್ಲ ಮೂಲಸೌಕರ್ಯದ ವ್ಯವಸ್ಥೆ ಮಾಡಿಕೊಳ್ಳುವಂತೆ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಿಲ್ಲಾ ವ್ಯವಸ್ಥಾಪಕರಿಗೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.

ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನೋದ್‌ಕುಮಾರ್‌ ಮಾತನಾಡಿ, ‘ಜಿಲ್ಲೆಯಲ್ಲಿ 474 ಹೆಕ್ಟೇರ್ ಪ್ರದೇಶದಲ್ಲಿ ಹೈಬ್ರಿಡ್ ಬಿಳಿಜೋಳ ಬಿತ್ತನೆ ಮಾಡಗಿದ್ದು, 7,850 ಕ್ವಿಂಟಲ್ ಇಳುವರಿ ನಿರೀಕ್ಷಿಸಲಾಗಿದೆ. 32,260 ಹೆಕ್ಟೇರ್ ಪ್ರದೇಶದಲ್ಲಿ ಮಾಲ್ದಂಡಿ ಬಿಳಿಜೋಳ ಬಿತ್ತೆನೆ ಮಾಡಲಾಗಿದ್ದು, 3,51,510 ಕ್ವಿಂಟಲ್ ಇಳುವರಿ ನಿರೀಕ್ಷಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು