ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಆಕ್ಷೇಪಣೆ, ಸೇರ್ಪಡೆಗೆ ಡಿ.27ರವರೆಗೆ ಅವಕಾಶ

ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿ ಪ್ರಕಟ
Last Updated 21 ಡಿಸೆಂಬರ್ 2021, 14:16 IST
ಅಕ್ಷರ ಗಾತ್ರ

ಹಾವೇರಿ: ‘ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಯನ್ನು ಡಿ.6ರಂದು ಪ್ರಕಟಿಸಲಾಗಿದೆ. ಆಕ್ಷೇಪಣೆಗೆ ಹಾಗೂ ಸೇರ್ಪಡೆಗೆ ಡಿ.27ರವರೆಗೆ ಕಾಲಾವಕಾಶವಿದೆ’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಾದರೂ ಚುನಾವಣೆ ಘೋಷಣೆಯಾಗಬಹುದು. ಹಾಗಾಗಿ ಕರಡು ಮತದಾರರ ಪಟ್ಟಿಯಲ್ಲಿ ಅರ್ಹ ಶಿಕ್ಷಕರು ಸೇರ್ಪಡೆಯಾಗದಿದ್ದಲ್ಲಿ ಅಂತಹ ಶಿಕ್ಷಕರು ತಮ್ಮ ಹೆಸರು ಸೇರ್ಪಡೆಗೊಳಿಸಲು ಅರ್ಜಿ ನಮೂನೆ-19ನ್ನು ಭರ್ತಿಮಾಡಿ ಡಿ. 27ರೊಳಗಾಗಿ ಸಲ್ಲಿಸಬೇಕು. ಕಾಲಾವಕಾಶ ಕಡಿಮೆ ಇರುವುದರಿಂದ ಹೆಚ್ಚಿನ ಆಸಕ್ತಿಯಿಂದ ಶಿಕ್ಷಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡಿಸಲು ಸಹಕರಿಸಬೇಕು ಎಂದರು.

ಕರಡು ಮತದಾರರ ಪಟ್ಟಿಯು ಪ್ರಕಟವಾದ ದಿನದಿಂದ ಈವರೆಗೆ 170 ಅರ್ಜಿಗಳು ಸ್ವೀಕೃತವಾಗಿದ್ದು, ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಮತದಾರರು ಸೇರ್ಪಡೆಗೊಳ್ಳಲು ಅವಕಾಶವಿರುತ್ತದೆ. ಮುಖ್ಯ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಸ್ವೀಕೃತವಾದ ಜಿಲ್ಲೆಯ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ಈಗಾಗಲೇ ಜಿಲ್ಲಾ ನೋಡಲ್ ಅಧಿಕಾರಿಗಳು, ತಾಲ್ಲೂಕು ನೋಡಲ್ ಅಧಿಕಾರಿಗಳಿಗೆ ಹಾಗೂ ಆಯಾ ತಾಲ್ಲೂಕು ತಹಶೀಲ್ದಾರರಿಗೆ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಎಂಟು ತಾಲ್ಲೂಕಿನ ಮತದಾರರ ಪಟ್ಟಿಗೆ ಹೆಚ್ಚಿನ ಸೇರ್ಪಡೆಗೆ ಮಾಡಲು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು ಜಿಲ್ಲಾ ನೋಡಲ್ ಅಧಿಕಾರಿಯಾಗಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ತಾಲ್ಲೂಕು ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ ಎಂದರು.

ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಅರ್ಹತೆ ಹೊಂದಿರುವ ಎಲ್ಲರೂ ಅರ್ಹ ಮತದಾರರೆನಿಸಿಕೊಳ್ಳುತ್ತಾರೆ. ಅನುದಾನರಹಿತ ಪ್ರೌಢಶಾಲೆ ನೌಕರರಿಗೆ ಡಿಡಿಪಿಐ ಅನೆಕ್ಷರ್ 2ರಲ್ಲಿ ಮೇಲುರುಜು ಮಾಡಬೇಕು. ಅನುದಾನ ರಹಿತ ಪದವಿ ಪೂರ್ವ ನೌಕರರಿಗೆ ಡಿಡಿಪಿಯು ಅವರು ಅನೆಕ್ಷರ್ ರಲ್ಲಿ ಮೇಲುರುಜು ಮಾಡಬೇಕಾಗುತ್ತದೆ. ಅನುದಾನ ರಹಿತ ಪದವಿ ಕಾಲೇಜು ನೌಕರರಿಗೆ ಜಿಲ್ಲಾಧಿಕಾರಿಗಳಿಂದ ಗೊತ್ತುಪಡಿಸಿದ ಅಧಿಕಾರಿ ಅನೆಕ್ಷರ್ 2ರಲ್ಲಿ ಮೇಲುರುಜು ಮಾಡಬೇಕಾಗುತ್ತದೆ. ಅತಿಥಿ ಉಪನ್ಯಾಸಕರು ಮತದಾರರ ಪಟ್ಟಿ ಸೇರ್ಪಡೆಗೆ ಅರ್ಹರಾಗಿರುವುದಿಲ್ಲ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರು ಮಾತನಾಡಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಮತದಾರ ನೋಂದಣಿ ಅಧಿಕಾರಿಗಳಾಗಿದ್ದು, ಜಿಲ್ಲಾಧಿಕಾರಿಗಳು ಸಹಾಯಕ ಮತದಾರ ನೋಂದಣಿ ಅಧಿಕಾರಿಗಳಾಗಿದ್ದಾರೆ. ಜ.12ರಂದು ಎಲ್ಲ ಪೂರಕ ದಾಖಲೆಗಳನ್ನು ಸಲ್ಲಿಸಲಾಗುವುದು ಹಾಗೂ ಜ.17ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಚುನಾವಣಾ ತಹಶೀಲ್ದಾರ ಅಮೃತಗೌಡ ಪಾಟೀಲ, ಬಿಜೆಪಿಯ ಪ್ರಭು ಹಿಟ್ನಳ್ಳಿ, ಜೆ.ಡಿ.ಎಸ್.ನ ಮಾಲತೇಶ ಬೇವಿನಹಿಂಡಿ ಹಾಗೂ ಅಮೀರಾಜನ ಬೇಪಾರಿ, ಭಾರತೀಯ ಕಮ್ಯೂನಿಸ್ಟ್ ಪಕ್ಷ ರುದ್ರಪ್ಪ ಜಾಬೀನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT