ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಹೊಸ ಶಿಕ್ಷಣ ನೀತಿ ಜಾರಿಗೆ ವಿರೋಧ

Last Updated 26 ನವೆಂಬರ್ 2020, 10:40 IST
ಅಕ್ಷರ ಗಾತ್ರ

ಹಾವೇರಿ: ಅಖಿಲ ಭಾರತ ಮುಷ್ಕರ ಬೆಂಬಲಿಸಿ ಹಾಗೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸದಿರಲು ಆಗ್ರಹಿಸಿ ಎಸ್ಎಫ್ಐ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.

ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಮಾತಾನಾಡಿ, ‘ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಇದ್ದು, ಭಾರತದ ಇನ್ನುಳಿದ ರಾಷ್ಟ್ರೀಯ ಪ್ರಾದೇಶಿಕ ಭಾಷೆಗಳಲ್ಲಿ ಇಲ್ಲ ಮತ್ತು ಸಾರ್ವಜನಿಕವಾಗಿ ಹಾಗೂ ಕೇಂದ್ರ ಹಾಗೂ ರಾಜ್ಯಗಳ ಶಾಸನ ಸಭೆಯಲ್ಲಿ ಚರ್ಚೆಯಾಗದೆ, ಅದರ ಸಾಧಕ-ಬಾಧಕಗಳನ್ನು ಅರಿಯದೆ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತದೆ’ ಎಂದು ಆರೋಪಿಸಿದರು.

ಮೇಲುನೋಟಕ್ಕೆ ಹೊಸ ಶಿಕ್ಷಣ ನೀತಿ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ, ಅದರ ಅಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ ಕೇಸರಿಕರಣ ಇತಿಹಾಸ ತಿರುಚುವಿಕೆ ಸೇರಿದಂತೆ ಹತ್ತು ಹಲವು ಅಂಶಗಳು ಅಡಕವಾಗಿರುವುದು ಕಾಣುತ್ತದೆ. ನಮ್ಮ ರಾಜ್ಯದಲ್ಲಿ ಸಹ ಕೇಂದ್ರದ ಒತ್ತಡದ ಮೇರೆಗೆ ಯಾವುದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ಮಾಡುವುದನ್ನು ಕರ್ನಾಟಕ ರಾಜ್ಯದ ಎಡ ವಿದ್ಯಾರ್ಥಿ ಸಂಘಟನೆಗಳು ಎಸ್ಎಫ್ಐ, ಎಐಡಿಎಸ್ಓ, ಕೆವಿಎಸ್ ಸೇರಿ ಇತರ ಎಡ ಮತ್ತು ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ಜಂಟಿಯಾಗಿ ಖಂಡಿಸುತ್ತವೆ ಎಂದರು.

ಎಸ್ಎಫ್ಐ ಜಿಲ್ಲಾ ಮುಖಂಡ ಶ್ರೀಕಾಂತ್ ಬಾರ್ಕಿ ಮಾತನಾಡಿದರು. ಅರುಣ್ ಆರೇರ್, ನಿಯಾಜ್ ಎಸ್.ಎಂ, ಕೃಷ್ಣ ಕಡಕೋಳ, ಮಹೇಶ್ ಎನ್, ಭರಮಪ್ಪ ಎಸ್.ಎಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT