ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂರಿಯಾ ಕೊರತೆ ನೀಗಿಸಿ: ಜೆಡಿಎಸ್‌

Last Updated 5 ಆಗಸ್ಟ್ 2020, 15:45 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ತೀವ್ರ ಪರದಾಡುತ್ತಿದ್ದಾರೆ. ಕೂಡಲೇ ಸಹಕಾರ ಸಂಘಗಳಿಗೆ ರಸಗೊಬ್ಬರ ಪೂರೈಸಿ, ಅನ್ನದಾತರ ಹಿತ ಕಾಯಬೇಕು ಎಂದು ಜೆಡಿಎಸ್‌ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಮುಂಗಾರು ಹಂಗಾಮಿಗೆ ಗೋವಿನ ಜೋಳ, ಹತ್ತಿ ಬೆಳೆಗಳನ್ನು ರೈತರು ಬೆಳೆದಿರುತ್ತಾರೆ. ಮಳೆ ಹೆಚ್ಚಾದ ಕಾರಣಕ್ಕೆ ಬೆಳೆಗಳಿಗೆ ಶೀತ ರೋಗ ಅಂಟಿಕೊಳ್ಳುತ್ತದೆ. ಬೇರು ಕೊಳೆ ರೋಗದಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಯೂರಿಯಾ ಗೊಬ್ಬರದ ಅವಶ್ಯಕತೆ ಇದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಕ್ವಾರಂಟೈನ್ ಕೇಂದ್ರಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಉಪಹಾರ, ಊಟ ನೀಡುತ್ತಿಲ್ಲ. ಕೆಲವು ಕಡೆ ಮೂಲಸೌಲಭ್ಯ ಕೊರತೆ ಇದೆ.ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯೆತೆ ನೀಡಬೇಕು. ಎಲ್ಲ ವರ್ಗದ ಕಾರ್ಮಿಕರಿಗೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸಂಜಯ ಡಾಂಗೆ, ಜಿಲ್ಲಾ ಕಾರ್ಯಾಧ್ಯಕ್ಷ ಉಮೇಶ ತಳವಾರ, ಜಿಲ್ಲಾ ಯುವ ಘಟಕ ಅಧ್ಯಕ್ಷ ಅಣ್ಣಯ್ಯ ಚಾವಡಿ, ಅಲ್ತಾಫ್‌ ನದಾಫ್‌, ಸುರೇಶ ನಾಯಕ್, ಮಂಜುನಾಥ ಕನ್ನಾಯ್ಕನವರ, ಸುನೀಲ ದಂಡೆಮ್ಮನವರ, ನಾಗರಾಜ ಎಂ.ಬಿ, ಮೌಲಾಲಿ ಎರೆಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT