ಮಂಗಳವಾರ, ಫೆಬ್ರವರಿ 25, 2020
19 °C
ಬೆಂಗಳೂರಿನಿಂದ ಬೆಳಗಾವಿವರೆಗೆ 520 ಕಿ.ಮೀ. ಪಾದಯಾತ್ರೆ

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ರಾಜ್ಯದಲ್ಲಿ ಖಾಸಗಿ ಸಂಸ್ಥೆ ಮತ್ತು ಐಟಿ–ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ 80ರಷ್ಟು ಉದ್ಯೋಗ ಕಲ್ಪಿಸಲು ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕು ಎಂದು ರಾಮಭಕ್ತ ಮಂಜುನಾಥ್‌ ಆಗ್ರಹಿಸಿದರು. 

ಬೆಂಗಳೂರಿನ ಹೂಡಿ ಗ್ರಾಮದಿಂದ ಬೆಳಗಾವಿಯ ಸುವರ್ಣಸೌಧದವರೆಗೂ 520 ಕಿ.ಮೀ. ಕೈಗೊಂಡಿರುವ ಪಾದಯಾತ್ರೆಯು ಮಂಗಳವಾರ ನಗರ ತಲುಪಿದ ಸಂದರ್ಭದಲ್ಲಿ ಅವರು ಮಾತನಾಡಿದರು. 

‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’. ಆದರೆ, ಸಿ ಮತ್ತು ಡಿ ದರ್ಜೆಯ ನೌಕರಿಗಳು ಮಾತ್ರ ಕನ್ನಡಿಗರಿಗೆ ಸಿಗುತ್ತಿವೆ. ಐಎಎಸ್‌, ಐಪಿಎಸ್‌ ಹುದ್ದೆಗಳನ್ನು ಬಹುಪಾಲು ಹೊರರಾಜ್ಯದವರೇ ಕಬಳಿಸುತ್ತಿದ್ದಾರೆ. ಹಾಗಾಗಿ ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕು. ಶೇ 80ರಷ್ಟು ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ಒತ್ತಾಯಿಸಿದರು. 

‘ಫೆ.2ರಂದು ಬೆಂಗಳೂರಿನ ಹೂಡಿ ಗ್ರಾಮದಿಂದ ಹೊರಟು, ಫೆ.11ಕ್ಕೆ ಹಾವೇರಿ ತಲುಪಿದ್ದೇವೆ. ಫೆ.15ಕ್ಕೆ ಬೆಳಗಾವಿಯ ಸುವರ್ಣಸೌಧ ತಲುಪಲಿದ್ದೇವೆ. ನಮ್ಮ ಹೋರಾಟಕ್ಕೆ ಬೆಂಬಲ ನೀಡುವವರು ಮೊ:9319464683 ಸಂಖ್ಯೆಗೆ ಮಿಸ್ಡ್‌ ಕಾಲ್‌ ನೀಡಿ ಬೆಂಬಲಿಸಬಹುದು’ ಎಂದು ‘ಕರವೇ ಗಜಸೇನೆ’ಯ ಬೆಂಗಳೂರು ನಗರ ಉಪಾಧ್ಯಕ್ಷ ದಿಲೀಪ್‌ಕುಮಾರ್‌ ಹೇಳಿದರು. 

ಪಾದಯಾತ್ರೆಯಲ್ಲಿ ಆಂಜಿ, ದಿನೇಶ್‌, ಮುನಿಕೃಷ್ಣ, ನಿಂಗರಾಜು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು