ಹಾವೇರಿ: ‘ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲೆಯ ವಿವಿಧ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಪ್ರಾಂಗಣಗಳಲ್ಲಿ ಕೇಂದ್ರ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರದ ಮಾರ್ಗಸೂಚಿಯಂತೆ ಭತ್ತ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದರು.

‘ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಲ್ಗೆ ₹ 2,369 ಹಾಗೂ ಗ್ರೇಡ್–ಎ ಭತ್ತಕ್ಕೆ ಕ್ವಿಂಟಲ್ಗೆ ₹ 2389 ದರದಂತೆ ಭತ್ತ ಖರೀದಿಗೆ ಅವಕಾಶವಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಲ್ನಂತೆ, ಗರಿಷ್ಠ 50 ಕ್ವಿಂಟಲ್ ಭತ್ತ ಖರೀದಿಸಬಹುದಾಗಿದೆ. ಸೆ. 15ರಿಂದ ಅಕ್ಟೋಬರ್ 31ರವರೆಗೆ ರೈತರ ನೋಂದಣಿ ಪ್ರಕ್ರಿಯೆ ಕೈಗೊಳ್ಳಲು ಹಾಗೂ ನವೆಂಬರ್ 1ರಿಂದ 2026ರ ಫೆಬ್ರುವರಿ 28ರವರೆಗೆ ನೋಂದಾಯಿತ ರೈತರಿಂದ ಭತ್ತ ಖರೀದಿಸಬೇಕು. ನಂತರ, ಮಿಲ್ಗಳಲ್ಲಿ ಶೇಖರಿಸುವ ಮತ್ತು ಪರಿವರ್ತಿಸುವ ಕಾರ್ಯವನ್ನು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧಿಕಾರಿಗಳು ಮಾಡಬೇಕು’ ಎಂದು ಹೇಳಿದರು.

‘ಹಾನಗಲ್, ರಾಣೆಬೆನ್ನೂರು, ಶಿಗ್ಗಾವಿ ಹಾಗೂ ಹಿರೇಕೆರೂರು, ರಟ್ಟೀಹಳ್ಳಿ ತಾಲ್ಲೂಕಿನ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಬೇಕು. ರೈತರಿಂದ ಖರೀದಿಸಿದ ಭತ್ತದ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಬೇಕು. ಭತ್ತ ಖರೀದಿ ಕೇಂದ್ರದ ಬಗ್ಗೆ ಪ್ರಚಾರ ನಡೆಸಿ, ಕರಪತ್ರ, ಬ್ಯಾನರ್ ಮೂಲಕ ರೈತರಿಗೆ ಮಾಹಿತಿ ತಲುಪಿಸಬೇಕು’ ಎಂದರು.

‘ಖರೀದಿ ಕೇಂದ್ರಗಳ ಪ್ರಕ್ರಿಯೆ ಮೇಲೆ ನಿಗಾ ವಹಿಸಲು ಹಾಗೂ ವ್ಯವಸ್ಥಿತವಾಗಿ ನಡೆಸಲು ತಹಶೀಲ್ದಾರ್ಗಳು, ಕಂದಾಯ ಇಲಾಖೆ ಹಾಗೂ ಎಪಿಎಂಸಿ ಅಧಿಕಾರಿಗಳು ತಾಲ್ಲೂಕು ನೋಡಲ್ ಅಧಿಕಾರಿಗಳಾಗಿ ಕೆಲಸ ಮಾಡಬೇಕು. ಆಹಾರ ಉಪನಿರ್ದೇಶಕರು ಜಿಲ್ಲಾ ನೋಡಲ್ ಅಧಿಕಾರಿಗಳಾಗಿರಬೇಕು’ ಎಂದು ಹೇಳಿದರು.

ಕೃಷಿ ಇಲಾಖೆ ಅಧಿಕಾರಿಗಳು ಮಾತನಾಡಿ, ‘ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 29,836 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದೆ. ಹಾನಗಲ್ ತಾಲ್ಲೂಕಿನ 14,620 ಹೆಕ್ಟೇರ್, ಶಿಗ್ಗಾವಿಯಲ್ಲಿ 6,681, ಹಿರೇಕೆರೂರು ಮತ್ತು ರಟ್ಟೀಹಳ್ಳಿ ತಾಲ್ಲೂಕಿನಲ್ಲಿ 1,780 ಹಾಗೂ ರಾಣೆಬೆನ್ನೂರು ತಾಲ್ಲೂಕಿನ 6,220 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.