ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಪರ ಘೋಷಣೆ ಆರೋಪ: ನಾಶಿಪುಡಿ ಪೊಲೀಸ್‌ ವಶಕ್ಕೆ

Published 29 ಫೆಬ್ರುವರಿ 2024, 15:37 IST
Last Updated 29 ಫೆಬ್ರುವರಿ 2024, 15:37 IST
ಅಕ್ಷರ ಗಾತ್ರ

ಬ್ಯಾಡಗಿ (ಹಾವೇರಿ ಜಿಲ್ಲೆ): ವಿಧಾನಸೌಧದಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಘೋಷಣೆ ಕೂಗಿದ ಆರೋಪಿ ಮಹಮ್ಮದ್‌ ಶಫಿ ನಾಶಿಪುಡಿ ಎಂಬುವರನ್ನು ಬುಧವಾರ ತಡರಾತ್ರಿ ತಾಲ್ಲೂಕಿನ ಮೋಟೆಬೆನ್ನೂರ ಬಳಿಯಿರುವ ಎಸ್‌.ಎ.ಎನ್‌.ಕೋಲ್ಡ್‌ ಸ್ಟೋರೇಜ್‌ನಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ ಪಡೆದರು.

‘ಬ್ಯಾಡಗಿ ಹಾಗೂ ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಧ್ವನಿ ಪರೀಕ್ಷೆ ಮತ್ತು ವಿಚಾರಣೆಗಾಗಿ ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 

‘ಹಲವು ವರ್ಷಗಳಿಂದ ಬ್ಯಾಡಗಿಯಲ್ಲಿ ಮೆಣಸಿನಕಾಯಿ ವರ್ತಕ ಆಗಿರುವ ನಾಶಿಪುಡಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು’ ಎಂದು ಬಿಜೆಪಿ ಮುಖಂಡರು ಬುಧವಾರ ಪೊಲೀಸರಿಗೆ ದೂರು ಸಲ್ಲಿಸಿದ್ದರು.

Quote - ಶ್ರೀರಾಮುಲು ಕೋಟ್ ದೇಶದ್ರೋಹಿಗಳಿಗೆ ರಕ್ಷಣೆ ನೀಡುವುದು ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ. ಪಾಕಿಸ್ತಾನ್ ಪರ ಘೋಷಣೆ ಕೂಗುವವರು ಭಾರತ ಬಿಟ್ಟು ಅಲ್ಲಿಯೇ ಹೋಗಲಿ. ಅಂಥವರ ವಿಮಾನ ಪ್ರಯಾಣದ ಖರ್ಚು ನಾವೇ ಕೊಡುತ್ತೇವೆ. –ಬಿ.ಶ್ರೀರಾಮುಲು ಬಿಜೆಪಿ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT