ಹಾವೇರಿ: ಉಕ್ರೇನ್ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಮೃತದೇಹ ಅವರ ಹುಟ್ಟೂರಾದ ಹಾವೇರಿ ಜಿಲ್ಲೆಯ ಚಳಗೇರಿಗೆ ತಲುಪಿದೆ. ಪೋಷಕರು ಮತ್ತು ಗ್ರಾಮಸ್ಥರು ನವೀನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ದುಬೈನಿಂದ ಎಮಿರೇಟ್ಸ್ ಇಕೆ 568 ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ನಸುಕಿನಲ್ಲಿ ಮೃತದೇಹವನ್ನು ತರಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃತದೇಹ ಮತ್ತು ನವೀನ್ಗೆ ಸಂಬಂಧಿಸಿದ ದಾಖಲೆಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಪೊಲೀಸ್ ಭದ್ರತೆಯಲ್ಲಿ ಆಂಬುಲೆನ್ಸ್ನಲ್ಲಿ ಮೃತದೇಹವನ್ನು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮಕ್ಕೆ ತರಲಾಯಿತು.

ಚಿತ್ರಗಳಲ್ಲಿ: ಉಕ್ರೇನ್ನಲ್ಲಿ ಮೃತಪಟ್ಟ ನವೀನ್ಗೆ ಹುಟ್ಟೂರಲ್ಲಿ ಅಂತಿಮ ನಮನ

ನವೀನ ಗ್ಯಾನಗೌಡರ ಮೃತದೇಹವನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ‘ಸೋಮವಾರ ಬೆಳಿಗ್ಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ. ನಂತರ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುವುದು. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ಈ ಹಿಂದೆಯೇ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.