ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ನಲ್ಲಿ ಮೃತಪಟ್ಟ ನವೀನ ಗ್ಯಾನಗೌಡರ ದೇಹದಾನಕ್ಕೆ ಕುಟುಂಬಸ್ಥರ ತೀರ್ಮಾನ

Last Updated 19 ಮಾರ್ಚ್ 2022, 1:52 IST
ಅಕ್ಷರ ಗಾತ್ರ

ಹಾವೇರಿ: ಉಕ್ರೇನ್‌ನಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ ಗ್ಯಾನಗೌಡರ ಮೃತದೇಹವನ್ನು ದಾವಣಗೆರೆಯ ಎಸ್‌.ಎಸ್‌.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

‘ಸೋಮವಾರ ಬೆಳಿಗ್ಗೆ 9 ಗಂಟೆಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ.ನಂತರ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುವುದು. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದಾವಣಗೆರೆಯ ಎಸ್‌.ಎಸ್‌. ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ತಿಳಿಸಿದರು.

‘ನನ್ನ ಮಗ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ಆಸೆ ಹೊಂದಿದ್ದ. ಆ ಆಸೆ ಈಡೇರಲಿಲ್ಲ. ಬೇರೆ ವೈದ್ಯಕೀಯ ವಿದ್ಯಾರ್ಥಿಗಳ ಮುಖಾಂತರವಾದರೂ ಅವನ ಮೃತದೇಹ ವೈದ್ಯಕೀಯ ಕ್ಷೇತ್ರಕ್ಕೆ ಬಳಕೆಯಾಗಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಂಡಿದ್ದೇವೆ’ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT